
ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಟ್ರಸ್ಟ್‌ನ ಅಧಿಕಾರಿ ಹಾಗೂ ಶ್ರೀಶೈಲದ ಅಹೋಬಿಲ ಮಠಾಧಿಪತಿಯ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಆರೋಪದ ಸಂಬಂಧ ತಿರುಮಲ ದೇವಸ್ಥಾನದ ಮುಖ್ಯ ಗೌರವ ಅರ್ಚಕ ಎ.ವಿ.ರಮಣ ದೀಕ್ಷಿತುಲು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಿಟಿಡಿ ಅಧಿಕಾರಿ ಎ.ವಿ.ಧರ್ಮರೆಡ್ಡಿ ಹಾಗೂ ಶ್ರೀಶೈಲದ ಅಹೋಬಿಲ ಮಠಾಧೀಶರು ಶ್ರೀಶೈಲದ ಗುಹೆಯೊಂದರಿಂದ ನಿಧಿ ತೆಗೆಯಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ರಮಣ ದೀಕ್ಷಿತುಲು ವಿಡಿಯೋ ಪೋಸ್ಟ್ ಮಾಡಿದ್ದರು. ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಅಹೋಬಿಲ ಮಠದ ಮುಖ್ಯಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಮಣ ದೀಕ್ಷಿತುಲು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.
ಮುಸ್ಲಿಮರಿಗೂ ತಿರುಪತಿ ದರ್ಶನಕ್ಕೆ ಅವಕಾಶದ ಬಗ್ಗೆ ಟಿಟಿಡಿ ಪರಿಶೀಲನೆ
ಈ ನಡುವೆ, ವಿಡಿಯೋದಲ್ಲಿ ಮಾಡಿರುವ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಅಹೋಬಿಲ ಮಠ, ‘ರಮಣ ದೀಕ್ಷಿತುಲು ಅವರು ತಿರುಮಲ ದೇವಸ್ಥಾನದ ಅರ್ಚಕ ಹುದ್ದೆಯಲ್ಲಿ ಮುಂದುವರೆಯಲು ಯೋಗ್ಯರಲ್ಲ. ಅವರನ್ನು ವಜಾಗೊಳಿಸಬೇಕು. ಟಿಟಿಡಿಯ ಧರ್ಮರೆಡ್ಡಿ ಆಗಾಗ ಅಹೋಬಿಲಕ್ಕೆ ಬಂದು ನಿಧಿ ತೆಗೆಯಲು ಹೊಂಚು ಹಾಕುತ್ತಿದ್ದಾರೆಂದು ಅವರು ಆರೋಪಿಸಿದ್ದಾರೆ. ಆದರೆ ಧರ್ಮರೆಡ್ಡಿ ಕಳೆದ ಐದು ವರ್ಷದಲ್ಲಿ ಒಮ್ಮೆಯೂ ಅಹೋಬಿಲ ಮಠಕ್ಕೆ ಬಂದೇ ಇಲ್ಲ’ ಎಂದು ಹೇಳಿದೆ.
ಭಾರತದ ಶ್ರೀಮಂತ ದೇವಸ್ಥಾನ ಇವು.. ಕೋಟಿ ಕೋಟಿ ಬರುತ್ತೆ ಕಾಣಿಕೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ