
ರಾಮ್‌ಪುರ(ಸೆ.07): ಸನಾತನ ಧರ್ಮ ನಿರ್ಮೂಲನೆ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಮತ್ತು ಅದನ್ನು ಸಮರ್ಥಿಸಿಕೊಂಡು ಮಾತನಾಡಿದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದ ರಾಮ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ,
ಇಬ್ಬರೂ ನಾಯಕರು ಉದ್ದೇಶ ಪೂರ್ವಕವಾಗಿ ಮತ್ತು ದ್ವೇಷದ ಕಾರಣಕ್ಕಾಗಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಇಬ್ಬರೂ, ಎರಡು ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹಬ್ಬಿಸುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ವಕೀಲರಾದ ಹರ್ಷ ಗುಪ್ತ ಮತ್ತು ರಾಮ್‌ಸಿಂಗ್ ಲೋಧಿ ಸಲ್ಲಿಸಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಕೊಳ್ಳಲಾಗಿದೆ.
ಶಾರುಖ್ಗೂ ಸಂಚಕಾರ ತಂದ ಸನಾತನ ಧರ್ಮದ ವಿವಾದ: ಜವಾನ್ ಚಿತ್ರಕ್ಕೆ ಬಾಯ್ಕಾಟ್ ಬಿಸಿ!
ಕಳೆದ ಶನಿವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ‘ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು’ ಎಂದು ಕರೆ ಕೊಟ್ಟಿದ್ದರು.
ಇನ್ನು ಉದಯನಿಧಿ ಹೇಳಿಕೆ ಸಮರ್ಥಿಸಿದ್ದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಯಾವ ಧರ್ಮದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ