
ಅಮರಾವತಿ(ಡಿ.29): ಆಂಧ್ರಪ್ರದೇಶದಲ್ಲಿ 2024ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ರಾಜ್ಯದ ಜನತೆಗೆ 70 ರೂ.ಗೆ ಮದ್ಯ ನೀಡುವುದಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರವಸೆ ನೀಡಿದೆ. ಹೌದು ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸೋಮು ವೀರರಾಜು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಅಪಾರ ಸಂಪನ್ಮೂಲಗಳು ಮತ್ತು ಸುದೀರ್ಘ ಕರಾವಳಿಯ ಹೊರತಾಗಿಯೂ ರಾಜಕೀಯ ಶಕ್ತಿಗಳು ರಾಜ್ಯದ ಅಭಿವೃದ್ಧಿಯಲ್ಲಿ ವಿಫಲವಾಗಿವೆ ಎಂದು ಹೇಳಿದರು.
ರಾಜ್ಯದಲ್ಲಿ ದುಬಾರಿ ಬೆಲೆಗೆ ಮದ್ಯ ಮಾರಾಟವಾಗುವುದನ್ನು ಪರೋಕ್ಷವಾಗಿ ಉಲ್ಲೇಖಿಸಿದ ವೀರರಾಜು, ''ರಾಜ್ಯದಲ್ಲಿ ಒಂದು ಕೋಟಿ ಜನರು ಸೇವಿಸುತ್ತಾರೆ. ಹೀಗಿರುವಾಗ ನೀವು ಬಿಜೆಪಿಗೆ ಒಂದು ಕೋಟಿ ಮತ ನೀಡಿದರೆ, ನಾವು ನಿಮಗೆ ಕೇವಲ 75 ರೂಪಾಯಿಗೆ ಮದ್ಯ ಕೊಡುತ್ತೇವೆ. ಒಳ್ಳೆಯ ಆದಾಯ ಬಂದರೆ ಕೇವಲ 50 ರೂ.ಗೆ ಕೊಡುತ್ತೇವೆ (ಕೆಟ್ಟ ಮದ್ಯವಲ್ಲ) ಖಂಡಿತಾ ಒಳ್ಳೆಯದು. ಎಂದು ಟಾಂಗ್ ನೀಡಿದ್ದಾರೆ.
ಬ್ರಾಂಡ್‍ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರೀಮಿಯಂನಲ್ಲಿ ಮದ್ಯ ಮಾರಾಟವಾಗುತ್ತಿದೆ. ಇತ್ತೀಚೆಗೆ, ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆ. ಆದರೆ ‘ವಿಶೇಷ ಮಾರ್ಜಿನ್’ ಸೇರ್ಪಡೆಯೊಂದಿಗೆ ಎಂಆರ್‍ಪಿಗಳು ಬದಲಾಗದೆ ಇರುವುದರಿಂದ ಪ್ರಯೋಜನೆಯನ್ನು ಗ್ರಾಹಕರಿಗೆ ವರ್ಗಾಯಿಸಿಲ್ಲ ಎಂದು ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರದ ನೇರ ಲಾಭ ವರ್ಗಾವಣೆ ಯೋಜನೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕ, ಒಬ್ಬ ವ್ಯಕ್ತಿ ಒಂದು ತಿಂಗಳಲ್ಲಿ ಸರಾಸರಿ 12,000 ರೂಪಾಯಿ ಮೌಲ್ಯದ ಮದ್ಯವನ್ನು ಕುಡಿಯುತ್ತಾನೆ ಮತ್ತು ಜಗನ್ ಮೋಹನ್ ರೆಡ್ಡಿ ಈ ಹಣವನ್ನು ಒಟ್ಟುಗೂಡಿಸಿ ಒಂದು ಹೆಸರಿನಲ್ಲಿ ಹಿಂದಿರುಗಿಸುತ್ತಿದ್ದಾರೆ ಎಂದು ಜನರಿಗೆ ತಿಳಿಸಿದರು. ಅಲ್ಲದೇ ಅಮರಾವತಿಯನ್ನು ರಾಜಧಾನಿ ಮಾಡಲು ಬಿಜೆಪಿ ಬದ್ಧವಾಗಿದ್ದು, ರಾಜ್ಯದಲ್ಲಿ ಗೆದ್ದರೆ ಮೂರು ವರ್ಷಗಳಲ್ಲಿ ಅಭಿವೃದ್ಧಿ ಮಾಡಲಿದೆ ಎಂಬ ಭರವಸೆ ನೀಡಿದ್ದಾರೆ ವೀರರಾಜು.
ಚುನಾವಣಾ ಹೊಸ್ತಿಲ್ಲಿ ರಾಜ್ಯದ ಪ್ರಮುಖ ನಾಯಕರು ನೀಡುವ ಇಂತಹ ಹೇಳಿಕೆ ವೈಯುಕ್ತಿಕವಾಗಿದ್ದರೂ ಇದು ಪಕ್ಷದ ಘನತೆಗೆ ಧಕ್ಕೆಯುಂಟು ಮಾಡುತ್ತವೆ ಎಂಬುವುದರಲ್ಲಿ ಅನುಮಾನವಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ