
ನವದೆಹಲಿ(ಸೆ.24): ಹಿಂದುಳಿದ ವರ್ಗಗಳ(OBC) ಜಾತಿ ಗಣತಿ(Caste Census) ನಡೆಸುವುದು ಆಡಳಿತಾತ್ಮಕವಾಗಿ ಕಠಿಣ ಮತ್ತು ತೊಡಕಿನ ಕೆಲಸ. ಅಲ್ಲದೆ ಇಂಥ ಮಾಹಿತಿಯನ್ನು ಗಣತಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಪ್ರಜ್ಞಾಪೂರ್ವಕ ನಿರ್ಧಾರ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ(Supreme Court) ಮಾಹಿತಿ ನೀಡಿದೆ.
ಇತ್ತೀಚಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ನೇತೃತ್ವದಲ್ಲಿ 10 ಪಕ್ಷಗಳ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಜನಗಣತಿ ನಡೆಸಬೇಕು ಎಂದು ಮನವಿ ಮಾಡಿತ್ತು. ಜೊತೆಗೆ ದೇಶದ ಹಲವು ರಾಜ್ಯಗಳಿಂದಲೂ ಇಂಥ ಬೇಡಿಕೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಅಭಿಪ್ರಾಯ ವ್ಯಕ್ತಪಡಿಸಿರುವುದು ಮಹತ್ವ ಪಡೆದುಕೊಂಡಿದೆ.
2011ರಲ್ಲಿ ನಡೆದ ಆರ್ಥಿಕವಾಗಿ ಹಿಂದುಳಿದವರ ಜಾತಿ ಗಣತಿ(Caste Census) ಸಾಕಷ್ಟುತಪ್ಪುಗಳಿಂದ ಕೂಡಿತ್ತು ಮತ್ತು ದೋಷಪೂರಿತವಾಗಿತ್ತು. ಜಾತಿ ಗಣತಿ ನಡೆಸುವುದು ಅತಿ ಕಠಿಣ ಕೆಲಸ. ಹಿಂದುಳಿದ ವರ್ಗಗಳ ಗಣತಿ ನಡೆಸುವುದು ಸರ್ಕಾರಕ್ಕೆ ಹೊರೆ ಆಗುತ್ತದೆ ಮತ್ತು ಅತಿ ಸಂಕೀರ್ಣತೆಯಿಂದ ಕೂಡಿದ ಕೆಲಸವಾಗಿದೆ ಎಂದು ಕೇಂದ್ರ ಹೇಳಿದೆ.
ಜಾತಿಗಣತಿ ನಡೆಸಲು ಕೇಂದ್ರಕ್ಕೆ ಸೂಚಿಸಬೇಕು ಎಂದು ಕೋರಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಮಾಹಿತಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ