ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಶುಕ್ರವಾರ ಕರ್ನಾಟಕದಲ್ಲಿ ಕನ್ನಡ ಪರ ಹೋರಾಟಗಾರರು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.
ತಮಿಳನಾಡು (ಸೆ.29): ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಶುಕ್ರವಾರ ಕರ್ನಾಟಕದಲ್ಲಿ ಕನ್ನಡ ಪರ ಹೋರಾಟಗಾರರು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.
ಕೃಷ್ಣಗಿರಿ, ಧರ್ಮಪುರಿ, ಈರೋಡ್, ಸೇಲಂ ಮತ್ತು ನೀಲಗಿರಿ ಸೇರಿದಂತೆ ಕರ್ನಾಟಕದ ಗಡಿಯನ್ನು ಹಂಚಿಕೊಂಡಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಅಲರ್ಟ್ ಆಗಿರುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಮಿಳುನಾಡು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿ ಗುರುವಾರ ಪ್ರಕಟಣೆ ತಿಳಿಸಿದೆ.
'ಸಾರ್ವಜನಿಕ ಬಸ್‌ಗಳು ಮತ್ತು ಟ್ರಕ್‌ಗಳ ಸಾಗಣೆಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯ ಆಧಾರದ ಮೇಲೆ, ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
Breaking: ಎರಡೆರಡು ಬಂದ್ ಮಾಡಿದರೂ ತಲೆಕೆಡಿಸಿಕೊಳ್ಳದ ಪ್ರಾಧಿಕಾರ, ನೀರು ಬಿಡಿ ಎಂದು ಕರ್ನಾಟಕಕ್ಕೆ ಮತ್ತೆ ಸೂಚನೆ!
ಉಭಯ ರಾಜ್ಯಗಳ ನಡುವಿನ ಸಾರಿಗೆ ಸಂಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟೀಕರಣಕ್ಕಾಗಿ ಮತ್ತು ಇತರ ವಿಚಾರಣೆಗಳಿಗಾಗಿ, ಜನರು ಕೃಷ್ಣಗಿರಿ ಜಿಲ್ಲಾ ವಿಭಾಗೀಯ ಕಚೇರಿಯನ್ನು 9498170430 ಅಥವಾ 9498215407 ಗೆ ಸಂಪರ್ಕಿಸಲು ತಿಳಿಸಲಾಗಿದೆ.
ಕೃಷ್ಣಗಿರಿಯ ಹಿರಿಯ ಅಧಿಕಾರಿಯ ಪ್ರಕಾರ, ತಮಿಳುನಾಡಿನಿಂದ ಕರ್ನಾಟಕಕ್ಕೆ ತೆರಳುತ್ತಿದ್ದ 400 ಟ್ರಕ್‌ಗಳು ಶೂಲಗಿರಿ, ಕೃಷ್ಣಗಿರಿ ತಾಲ್ಲೂಕು, ಒಪ್ಪದವಾಡಿ (ಬರಗೂರು) ಮತ್ತು ಸಪ್ಪನಿಪಟ್ಟಿ ಮುಂತಾದ ಪ್ರದೇಶಗಳಲ್ಲಿ ಸ್ಥಗಿತಗೊಂಡಿವೆ. ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವ ಖಾಸಗಿ ವಾಹನಗಳನ್ನೂ ಗಡಿಯಲ್ಲಿ ನಿಲ್ಲಿಸಲಾಗಿದೆ. ವಾಹನ ಮಾಲೀಕರ ಅಗತ್ಯ ವಿವರಗಳನ್ನು ನಮೂದಿಸಿದ ನಂತರ ಮತ್ತು ಅಂತಹ ವಾಹನಗಳ ಆಗಮನದ ಬಗ್ಗೆ ಕರ್ನಾಟಕದ ಅಧಿಕಾರಿಗಳೊಂದಿಗೆ ಮಾಹಿತಿ ಹಂಚಿಕೊಂಡ ಬಳಿಕ ತುರ್ತು ಉದ್ದೇಶಗಳಿಗಾಗಿ ಜನರು ಪ್ರಯಾಣಿಸುವ ವಾಹನಗಳನ್ನು ಮಾತ್ರ ಗಡಿ ದಾಟಲು ಅನುಮತಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಬಂದ್‌ಗೆ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.
ಕೋರ್ಟ್ ಹೊರಗೆ ಕಾವೇರಿ ಸಮಸ್ಯೆಪರಿಹಾರಕ್ಕೆ ನಾವು ಸಿದ್ಧ: ಸಿಎಂ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನದ ಕುರಿತು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು ಉಭಯ ರಾಜ್ಯಗಳ ನಡುವಿನ ಉದ್ವಿಗ್ನತೆಯ ನಡುವೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಫ್ರಿಡಾದಲ್ಲಿ ಸಭೆ ಸೇರಲಿದೆ.