ಪಿಣರಾಯಿ ವಿಜಯನ್ ಮನೆ ಮುಂದೆ ಇಡಿ ಅಧಿಕಾರಿಗಳ ಮೇಲೆಯೇ ದಾಳಿ, ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಹೈಕೋರ್ಟ್ ಹೇಳಿದ್ದೇನು?

Published : Jun 04, 2026, 01:30 PM IST
CBI Probe Demanded After Attack on ED Officials in Kerala rav

ಸಾರಾಂಶ

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮುಂದೆ ಇಡಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೀಡಿದ ಸೂಚನೆ ಏನು?

ಕೊಚ್ಚಿ (ಜೂ.4): ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್(Pinarayi vijayan) ಅವರ ಮನೆ ಮುಂದೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ED ಅಧಿಕಾರಿಗಳಿಗೆ ಸರಿಯಾದ ಭದ್ರತೆ ಒದಗಿಸುವಲ್ಲಿ ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ. ಹೀಗಾಗಿ, ಇದೇ ಪೊಲೀಸರು ತನಿಖೆ ನಡೆಸುವುದರಿಂದ ಆರೋಪಿಗಳಿಗೆ ಅನುಕೂಲವಾಗಲಿದೆ ಪ್ರಕರಣದ ಆರೋಪಿಗಳು ಸಿಕ್ಕಿಬಿಳುವುದಿಲ್ಲ, ಪ್ರಕರಣದ ಸತ್ಯಾಂಶ ಹೊರಬರುವುದಿಲ್ಲ. ಹೀಗಾಗಿ ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರ ದೂರಿನಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ಹೇಳಿದ್ದೇನು?

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಯ ಪ್ರಗತಿ ವರದಿ ನೀಡುವಂತೆ ಕೇರಳ ಸರ್ಕಾರಕ್ಕೆ ಸೂಚಿಸಿದೆ. ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿಗಳ ಪೀಠವು, ಮೂರು ವಾರಗಳೊಳಗೆ ವರದಿ ಸಲ್ಲಿಸಬೇಕೆಂದು ಗಡುವು ನೀಡಿದೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಏನೆಂಬುದನ್ನು ಕೇಳಿ ತಿಳಿಸುವುದಾಗಿ ಕೇಂದ್ರ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರತೀಯ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ರದ್ದು: ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್
ಟಿಎಂಸಿ ಲೀಡರ್‌ಗಳಿಗೆ ಡವಡವ: ಅಭಿಷೇಕ್ ಬ್ಯಾನರ್ಜಿಗೆ ನೋಟಿಸ್ ಬೆನ್ನಲ್ಲೇ ಮತ್ತೊಬ್ಬ ನಾಯಕನ ಮನೆ ಮೇಲೆ NIA ದಾಳಿ!