ಪಾಟ್ನಾ(ಫೆ.15): ಮೇವು ಹಗರಣದ ಡೊರಾಂಡಾ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೂ ಶಿಕ್ಷೆಯಾಗಿದೆ. ಈ ಪ್ರಕರಣವು ಡೊರಾಂಡಾ ಖಜಾನೆಯಿಂದ 139 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಸದ್ಯಕ್ಕೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿದ್ದರೆ ಇಲ್ಲಿಂದ ಲಾಲುಗೆ ಜಾಮೀನು ಸಿಗಲಿದೆ. ಇದು ಆಗದಿದ್ದಲ್ಲಿ ಲಾಲು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು.
ಆದರೆ, ಕೆಳ ನ್ಯಾಯಾಲಯದ ದಾಖಲೆಯನ್ನು ಗಮನಿಸಿದರೆ, ಮೇವು ಹಗರಣಕ್ಕೆ ಸಂಬಂಧಿಸಿದ ಹಿಂದಿನ ಪ್ರಕರಣಗಳಲ್ಲಿ ಲಾಲು ಯಾದವ್ ಮೂರು ವರ್ಷಗಳಿಗೂ ಹೆಚ್ಚು ಶಿಕ್ಷೆ ಅನುಭವಿಸಿದ್ದಾರೆ. ಈ ಹಿಂದೆ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಅವರಿಗೆ 14 ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣಗಳು ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿವೆ. ಶಿಕ್ಷೆಯ ಜೊತೆಗೆ 60 ಲಕ್ಷ ದಂಡವನ್ನೂ ತೆರಬೇಕಾಯಿತು. ಸದ್ಯ ಲಾಲು ಯಾದವ್ ಜಾಮೀನಿನ ಮೇಲೆ ಹೊರಗಿದ್ದಾರೆ.
ಸದ್ಯ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸರಿಯಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ಕೋರ್ಟ್ ಕೊಂಚ ರಿಲೀಫ್ ನೀಡಬಹುದು ಎಂದು ನಂಬಲಾಗಿದೆ. ಆದರೆ, ಹಿಂದಿನ ಪ್ರಕರಣಗಳನ್ನು ನೋಡಿದರೆ ಲಾಲು ಯಾದವ್ ಅವರಿಗೆ ಸಿಬಿಐ ನ್ಯಾಯಾಲಯದಿಂದ ಪರಿಹಾರ ಸಿಕ್ಕಿಲ್ಲ. ಮೇವು ಹಗರಣಕ್ಕೆ ಸಂಬಂಧಿಸಿದ ಹಿಂದಿನ ಪ್ರಕರಣಗಳಲ್ಲಿ ಲಾಲು ಅವರಿಗೆ ಐದರಿಂದ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ನಿಂದ ಲಾಲು ರಿಲೀಫ್ ಪಡೆದಿದ್ದರು.
ಮೇವು ಹಗರಣದ ಡೊರಾಂಡಾ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೂ ಶಿಕ್ಷೆಯಾಗಿದೆ. ಈ ಪ್ರಕರಣವು ಡೊರಾಂಡಾ ಖಜಾನೆಯಿಂದ 139 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಸದ್ಯಕ್ಕೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿದ್ದರೆ ಇಲ್ಲಿಂದ ಲಾಲುಗೆ ಜಾಮೀನು ಸಿಗಲಿದೆ. ಇದು ಆಗದಿದ್ದಲ್ಲಿ ಲಾಲು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು.
ಆದರೆ, ಕೆಳ ನ್ಯಾಯಾಲಯದ ದಾಖಲೆಯನ್ನು ಗಮನಿಸಿದರೆ, ಮೇವು ಹಗರಣಕ್ಕೆ ಸಂಬಂಧಿಸಿದ ಹಿಂದಿನ ಪ್ರಕರಣಗಳಲ್ಲಿ ಲಾಲು ಯಾದವ್ ಮೂರು ವರ್ಷಗಳಿಗೂ ಹೆಚ್ಚು ಶಿಕ್ಷೆ ಅನುಭವಿಸಿದ್ದಾರೆ. ಈ ಹಿಂದೆ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಅವರಿಗೆ 14 ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣಗಳು ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿವೆ. ಶಿಕ್ಷೆಯ ಜೊತೆಗೆ 60 ಲಕ್ಷ ದಂಡವನ್ನೂ ತೆರಬೇಕಾಯಿತು. ಸದ್ಯ ಲಾಲು ಯಾದವ್ ಜಾಮೀನಿನ ಮೇಲೆ ಹೊರಗಿದ್ದಾರೆ.
ಸದ್ಯ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸರಿಯಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ಕೋರ್ಟ್ ಕೊಂಚ ರಿಲೀಫ್ ನೀಡಬಹುದು ಎಂದು ನಂಬಲಾಗಿದೆ. ಆದರೆ, ಹಿಂದಿನ ಪ್ರಕರಣಗಳನ್ನು ನೋಡಿದರೆ ಲಾಲು ಯಾದವ್ ಅವರಿಗೆ ಸಿಬಿಐ ನ್ಯಾಯಾಲಯದಿಂದ ಪರಿಹಾರ ಸಿಕ್ಕಿಲ್ಲ. ಮೇವು ಹಗರಣಕ್ಕೆ ಸಂಬಂಧಿಸಿದ ಹಿಂದಿನ ಪ್ರಕರಣಗಳಲ್ಲಿ ಲಾಲು ಅವರಿಗೆ ಐದರಿಂದ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ನಿಂದ ಲಾಲು ರಿಲೀಫ್ ಪಡೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ