
ನವದೆಹಲಿ (ಅ.24): ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಕರ್ನಾಟಕದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತು ಕೇಂದ್ರದ ಮಾಜಿ ಸಚಿವರಾದ ಪ್ರಭಾವೀ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರಿಗೆ ಕೇಂದ್ರ ತನಿಖಾ ತಂಡಗಳಾದ ಸಿಬಿಐ ಮತ್ತು ಇ.ಡಿ ತನಿಖೆ ಬಿಸಿ ಮುಟ್ಟಿದ ಬೆನ್ನಲ್ಲೇ, ಇದೀಗ ಮತ್ತೋರ್ವ ಕಾಂಗ್ರೆಸ್ ಮುಖಂಡ ಹರೀಶ್ ರಾವತ್ ಅವರಿಗೆ ಸಿಬಿಐನಿಂದ ಬಂಧನಕ್ಕೊಳಗಾಗುವ ಭೀತಿ ಎದುರಾಗಿದೆ.
ಉತ್ತರಾಖಂಡ್‌ನಲ್ಲಿ 2016ರಲ್ಲಿ ತಮ್ಮದೇ ನೇತೃತ್ವದ ಸರ್ಕಾರ ಉಳಿಸಿಕೊಳ್ಳಲು ಶಾಸಕರ ಕುದುರೆ ವ್ಯಾಪಾರ ನಡೆಸಿದ್ದ ಆರೋಪ ಸಂಬಂಧ ರಾವತ್ ವಿರುದ್ಧ ಸಿಬಿಐ ಬುಧವಾರ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ, ಇದೇ ಎಫ್‌ಐಆರ್‌ನಲ್ಲಿ ಸುದ್ದಿ ವಾಹಿನಿಯೊಂದರ ಸಂಪಾದಕ ಹಾಗೂ ಸಚಿವ ಹರಕ್ ಸಿಂಗ್ ಹೆಸರುಗಳನ್ನು ಸಿಬಿಐ ಉಲ್ಲೇಖಿಸಿದೆ.
Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್...
ಏನಿದು ಕೇಸ್?: 2016ರಲ್ಲಿ ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿತ್ತು. ಈ ವೇಳೆ ಸರ್ಕಾರ ರಚನೆಗೆ ಮುಂದಾಗಿದ್ದ ಹರೀಶ್ ರಾವತ್, ಕಾಂಗ್ರೆಸ್‌ನಿಂದ ಬಂಡೆದ್ದು ಬಿಜೆಪಿ ಸೇರಿದ್ದ ಶಾಸಕರ ಬೆಂಬಲ ಪಡೆಯಲು ಅವರಿಗೆ ಹಣದ ಆಮಿಷ ನೀಡಿದ್ದರು. ರಾವತ್ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಅಣಿಯಾಗಿದ್ದ ವೇಳೆಯೇ, ಲಂಚದ ಆಮಿಷ ಒಡ್ಡಿದ್ದ ವಿಡಿಯೋಗಳು ಬಹಿರಂಗವಾಗಿ ಭಾರೀ ಗದ್ದಲ ಉಂಟಾಗಿತ್ತು. ಇದರ ಹೊರತಾಗಿಯೂ ರಾವತ್ ವಿಶ್ವಾಸಮತ ಗೆದ್ದು ಸರ್ಕಾರ ರಚಿಸಿದ್ದರು. ಆದರೆ ಪ್ರಕರಣ ಕುರಿತು ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು.
ಕೇಂದ್ರದ ಈ ಕ್ರಮದ ವಿರುದ್ಧ ರಾವತ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ರಾವತ್ ಕೋರಿಕೆಯನ್ನು ಇತ್ತೀಚೆಗೆ ತಿರಸ್ಕರಿಸಿದ್ದ ಹೈಕೋರ್ಟ್, ಸಿಬಿಐ ತನಿಖೆಗೆ ಸಮ್ಮತಿ ಸೂಚಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ