General Bipin Rawat Death: ಜನರಲ್ ಬಿಪಿನ್ ರಾವತ್ ಅತ್ಯುತ್ತಮ ಸೈನಿಕ, ನಿಜವಾದ ದೇಶಭಕ್ತ : ಪ್ರಧಾನಿ ಮೋದಿ!

By Suvarna NewsFirst Published Dec 8, 2021, 7:07 PM IST
Highlights

*ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ
*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ :  ಪ್ರಧಾನಿ
*ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ ವೀರ ಸೈನಿಕರಲ್ಲಿ ಒಬ್ಬರು: ಅಮಿತ್‌ ಶಾ

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಈ ದುರಂತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿರುವ ಮಾಹಿತಿಯನ್ನು ಭಾರತೀಯ ವಾಯುಸೇನಾ ಪಡೆ ದೃಢಪಡಿಸಿದೆ. ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಆದರೆ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುವಾಗ, ಮಧ್ಯಾಹ್ನ 12.20ಕ್ಕೆ ಪತನಗೊಂಡಿದೆ. 

ಈ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು ರಕ್ಷಣಾಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿಧನ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ. " ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಅತ್ಯಂತ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ" ಎಂದು ಹೇಳಿದ್ದಾರೆ.

"

ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ!

"ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ. ನಿಜವಾದ ದೇಶಭಕ್ತ, ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

 

Gen Bipin Rawat was an outstanding soldier. A true patriot, he greatly contributed to modernising our armed forces and security apparatus. His insights and perspectives on strategic matters were exceptional. His passing away has saddened me deeply. Om Shanti. pic.twitter.com/YOuQvFT7Et

— Narendra Modi (@narendramodi)

ಭಾರತದ ಮೊದಲ CDS ಆಗಿ, ಜನರಲ್ ರಾವತ್ ಅವರು ರಕ್ಷಣಾ ಸುಧಾರಣೆಗಳು ಸೇರಿದಂತೆ ನಮ್ಮ ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವಿವಿಧ ಅಂಶಗಳಲ್ಲಿ ಕೆಲಸ ಮಾಡಿದರು. ಅವರು ಸೈನ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಸೈನ್ಯಕ್ಕೆ ಶ್ರೀಮಂತ ಅನುಭವವನ್ನು ತಂದರು. ಅವರ ಅಸಾಧಾರಣ ಸೇವೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ ವೀರ ಸೈನಿಕರಲ್ಲಿ ಒಬ್ಬರು

ಇನ್ನು ಈ ಬೆನ್ನಲ್ಲೆ ಟ್ವೀಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ "ನಮ್ಮ ಸಿಡಿಎಸ್ ಜನರಲ್ ಬಿಪಿನ್ ರಾವತ್ ಜಿ ಅವರನ್ನು ಅತ್ಯಂತ ದುರಂತ ಅಪಘಾತದಲ್ಲಿ ಕಳೆದುಕೊಂಡಿರುವುದರಿಂದ ರಾಷ್ಟ್ರಕ್ಕೆ ಅತ್ಯಂತ ದುಃಖದ ದಿನ. ಮಾತೃಭೂಮಿಗೆ ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ ವೀರ ಸೈನಿಕರಲ್ಲಿ ಒಬ್ಬರು. ಅವರ ಅನುಕರಣೀಯ ಕೊಡುಗೆಗಳು ಮತ್ತು ಬದ್ಧತೆಯನ್ನು ಪದಗಳಲ್ಲಿ ಹೇಳಲಾಗುವುದಿಲ್ಲ. ನನಗೆ ತೀವ್ರ ನೋವಾಗಿದೆ" ಎಂದು ಹೇಳಿದ್ದಾರೆ.

 

A very sad day for the nation as we have lost our CDS, General Bipin Rawat Ji in a very tragic accident. He was one of the bravest soldiers, who has served the motherland with utmost devotion. His exemplary contributions & commitment cannot be put into words. I am deeply pained.

— Amit Shah (@AmitShah)

 

"ಶ್ರೀಮತಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗಳ ದುಃಖದ ನಿಧನಕ್ಕೆ ನಾನು   ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ.ಜಿಪಿ ಕ್ಯಾಪ್ಟನ್ ವರುಣ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಅಮಿತದ ಶಾ ಹೇಳಿದ್ದಾರೆ.

ಎಂಐ-17 ಹೆಲಿಕಾಪ್ಟರ್ ಅನ್ನು ವಿವಿಐಪಿ ಚಲನೆಯಲ್ಲಿ ಬಳಸಲಾಗುತ್ತದೆ

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

ಹೆಲಿಕಾಪ್ಟರ್‌ನಲ್ಲಿ ಯಾರೆಲ್ಲಾ ಇದ್ದರು?

ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.

click me!