
ನವದೆಹಲಿ: ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತರಾಖಂಡದಲ್ಲಿ 6,811 ಕೋಟಿ ರು. ವೆಚ್ಚದ 2 ಮಹತ್ವದ ಹೊಸ ರೋಪ್‌ವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋನ್‌ಪ್ರಯಾಗ್- ಕೇದಾರನಾಥ್(12.9 ಕಿ.ಮೀ.) ಮತ್ತು ಹೇಮಕುಂಡ್ ಸಾಹಿಬ್- ಗೋವಿಂದಘಾಟ್(12.4 ಕಿ.ಮೀ.) ನಡುವಿನ ಈ ಯೋಜನೆಗಳನ್ನು ಮುಂದಿನ 4ರಿಂದ 6 ವರ್ಷಗಳೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಕೇದಾರನಾಥ್‌ನಿಂದ ಸೋನ್‌ಪ್ರಯಾಗ್ ನಡುವಿನ ರೋಪ್‌ವೇ ಅನ್ನು 4,081 ಕೋಟಿ ವೆಚ್ಚದಲ್ಲಿ, ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಅತ್ಯಾಧುನಿಕ ಟ್ರೈಕೇಬಲ್ ಡಿಟ್ಯಾಚೇಬಲ್ ಗೊಂಡೋಲ (3ಎಸ್) ತಂತ್ರಜ್ಞಾನ ಬಳಸಿ ಇದರ ನಿರ್ಮಾಣವಾಗುತ್ತದೆ. ಪ್ರತಿ ಗಂಟೆಗೆ 1800 ಪ್ರಯಾಣಿಕರು, ಪ್ರತಿ ದಿನ ಸುಮಾರು 18 ಸಾವಿರ ಪ್ರಯಾಣಿಕರನ್ನು ಈ ಕೇಬಲ್ ಕಾರ್ ಹೊತ್ತೊಯ್ಯಲಿದೆ. ಹೇಮಕುಂಡ್ ಸಾಹಿಬ್ ಜಿ ಮತ್ತು ಗೋವಿಂದಘಾಟ್ ನಡುವಿನ ರೋಪ್‌ವೇ 2,730 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ರೈತರಿಗೆ ಸಿಗಲಿದೆ ಅಗ್ಗದ ದರದ ಜಾನುವಾರು ಔಷಧಿ!
ರೋಪ್‌ವೇ ನಿರ್ಮಾಣದ ಲಾಭವೇನು?
ಪ್ರಸ್ತುತ ಹೇಮಕುಂಡ್‌ಗೆ ಹಾಗೂ ಕೇದಾರನಾಥ ದೇವಸ್ಥಾನಕ್ಕೆ ತೆರಳುವ ದಾರಿ ದುರ್ಗಮವಾಗಿದ್ದು, ಜನ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು. ನಡೆಯಲಾರದವರನ್ನು ಕುದುರೆಗಳ ಮೇಲೆ ಕೈರಿಸಿಕೊಂಡು ಅಥವಾ ಹೊತ್ತುಕೊಂಡು ಹೋಗಲಾಗುತ್ತಿತ್ತು. ಭೂಕುಸಿತ ಸಂಭವಿಸಿದಾಗ ಪರಿಸ್ಥಿತಿ ಇನ್ನೂ ಕಠಿಣವಾಗುತ್ತಿತ್ತು. ಈ ಕಷ್ಟಗಳನ್ನು ತಪ್ಪಿಸಿ, ಪ್ರಯಾಣವನ್ನು ಸುಖಕರಗೊಳಿಸಲು ಹಾಗೂ ಎಲ್ಲಾ ಹವಾಮಾನದಲ್ಲೂ ಓಡಾಡಲು ಅನುಕೂಲವಾಗಲು ಈ ರೋಪ್‌ವೇ ಸಹಕಾರಿ. ಜೊತೆಗೆ ಇದು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದ್ದು, ಪ್ರಯಾಣದ ಸಮಯವೂ ಕಡಿಮೆಯಾಗಲಿದೆ.
ಇದನ್ನೂ ಓದಿ:ಪ್ರತಿಜ್ಞೆ ವೇಳೆ ಪಕ್ಷದ ಕಾರ್ಯಕರ್ತೆ ಬಳೆ ಎಗರಿಸಲು ಯತ್ನಿಸಿದ DMK ಕಾರ್ಪೊರೇಟರ್: ವಿಡಿಯೋ ನೋಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ