ಕೊರೋನಾ: ಕರ್ನಾಟಕ ಸೇರಿ 22 ರಾಜ್ಯಕ್ಕೆ 890 ಕೋಟಿ ರುಪಾಯಿ ಬಿಡುಗಡೆ

By Kannadaprabha News  |  First Published Aug 7, 2020, 9:04 AM IST

ಕೊರೋನಾ ಸೋಂಕಿತರಿಗೆ ಅನುಗುಣವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೊರೋನಾ ವಿರುದ್ಧ ಹೋರಾಡಲು ಎರಡನೇ ಕಂತಿನಲ್ಲಿ ಸುಮಾರು 800 ಕೋಟಿ ರುಪಪಾಯಿಗೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ನವದೆಹಲಿ(ಆ.07): ಮಹಾಮಾರಿ ಕೊರೋನಾ ವೈರಸ್‌ ವಿರುದ್ಧದ ಹೋರಾಟಕ್ಕಾಗಿ ಕರ್ನಾಟಕ ಸೇರಿದಂತೆ ದೇಶದ 22 ರಾಜ್ಯಗಳಿಗೆ ಕೇಂದ್ರ ಸರ್ಕಾರ 2ನೇ ಕಂತಿನಲ್ಲಿ 890 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಒಟ್ಟು ಕೊರೋನಾ ಸೋಂಕಿತರಿಗೆ ಅನುಗುಣವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಹಣ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 890.32 ಕೋಟಿ ರುಪಾಯಿ ಕೊರೋನಾ ನಿಯಂತ್ರಣ ಮೊತ್ತವು ಸೋಂಕು ಪತ್ತೆ ಹಾಗೂ ನಿರ್ವಹಣೆಗೆ ಅಗತ್ಯವಿರುವ ಆರ್‌ಟಿ-ಪಿಸಿಆರ್‌ ಯಂತ್ರ, ಆರ್‌ಎನ್‌ಎ ಕಿಟ್‌ಗಳು, ಟ್ರ್ಯೂನಾಟ್‌ ಮತ್ತು ಸಿಬಿ-ನ್ಯಾಟ್‌ ಯಂತ್ರಗಳು, ಐಸಿಯು ಬೆಡ್‌ಗಳು ಹಾಗೂ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಸೇರಿ ಇನ್ನಿತರರ ತರಬೇತಿಗೂ ಬಳಕೆಯಾಗಲಿದೆ ಎನ್ನಲಾಗಿದೆ.

Tap to resize

Latest Videos

'ಕೊರೋನಾ ಸಮರದಲ್ಲಿ ನಾವು ಕೊಂಚ ಎಡವಿರಬಹುದು, ಆದ್ರೆ ವಿಪಕ್ಷಗಳೇನು ಮಾಡಿದೆ?'

ಕೊರೋನಾ ನಿಯಂತ್ರಣ ಹಾಗೂ ನಿರ್ವಹಣೆಯ ಹೊಣೆಯನ್ನು ಹೊತ್ತಿರುವ ಕೇಂದ್ರ ಸರ್ಕಾರವು ಈ ಕುರಿತಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯವಿರುವ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಅಲ್ಲದೆ, ಇದಕ್ಕಾಗಿ 15000 ಕೋಟಿ ರು. ಪ್ಯಾಕೇಜ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದರು. ಈ ಪ್ರಕಾರ ಏಪ್ರಿಲ್‌ ತಿಂಗಳಲ್ಲಿ ಕೊರೋನಾ ಪರೀಕ್ಷೆಗೆ ಅಗತ್ಯವಿರುವ ಪರಿಕರಗಳ ಖರೀದಿಗೆ ಮೊದಲ ಹಂತದಲ್ಲಿ 3,000 ಕೋಟಿ ರು. ಪ್ಯಾಕೇಜ್‌ ಅನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿತ್ತು.

click me!