ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ? ವರ್ಷಾಂತ್ಯಕ್ಕೆ ಮೋದಿ ಅಡಿಗಲ್ಲು: ಎಚ್‌ಡಿಕೆ

Kannadaprabha News   | Kannada Prabha
Published : May 24, 2025, 04:44 AM ISTUpdated : May 24, 2025, 05:15 AM IST
HD Kumaraswamy

ಸಾರಾಂಶ

ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನವದೆಹಲಿ (ಮೇ.24): ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಇಡೀ ಕಾರ್ಖಾನೆಯನ್ನು ಅತ್ಯಾಧುನಿಕವಾಗಿ ನಿರ್ಮಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ.

ಸುಮಾರು ₹8000ರಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (ಎಸ್‌ಎಐಎಲ್‌) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ರು. ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.

ಭದ್ರಾವತಿಯ ವಿಎಸ್‌ಐಎಲ್‌ ಪುನಶ್ಚೇತನಕ್ಕೆ ಪ್ರಯತ್ನ ನಡೆಯುತ್ತಿದೆ. 2 ತಿಂಗಳಲ್ಲಿ ಡಿಪಿಆರ್‌ ಸಿದ್ಧವಾಗಲಿದೆ. ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆ ಜಾರಿಗೆ ಬರಲಿದೆ. 8ರಿಂದ 10 ಸಾವಿರ ಕೋಟಿ ರು. ಹೂಡಿಕೆಗೆ ಚಿಂತನೆ ನಡೆದಿದೆ. ಇಡೀ ಕಾರ್ಖಾನೆಯನ್ನು ಅತ್ಯಾಧುನಿಕವಾಗಿ ನಿರ್ಮಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಇದಕ್ಕೆ ಅಡಿಗಲ್ಲು ಹಾಕಲಿದ್ದಾರೆ.
- ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ

ವರ್ತುಲ ರಸ್ತೆ ಯೋಜನೆಗೆ ಕೇಂದ್ರದಿಂದ ಶೀಘ್ರ ಒಪ್ಪಿಗೆ: ಬೆಂಗಳೂರು ನಗರದ ವಾಹನ ದಟ್ಟಣೆ ಗಣನೀಯವಾಗಿ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆ ಮುಂದೆ ಬರಲಿದೆ. ಯೋಜನೆಗೆ 'ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' ಒಪ್ಪಿಗೆ ನೀಡಿದೆ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಗುರುವಾರ ನಿತಿನ್ ಗಡ್ಕರಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾದಾಗ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು