
ನವದೆಹಲಿ/ಮುಂಬೈ(ಆ.23): ಏರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ರಫ್ತಿನ ಮೇಲೆ ಶೇ.40ರಷ್ಟುಸುಂಕ ಹೇರಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ರೈತರು ದೇಶದ ಅತಿದೊಡ್ಡ ಈರುಳ್ಳಿ ಮಾರುಕಟ್ಟೆಯಾದ ಮಹಾರಾಷ್ಟ್ರದ ಲಾಸಲಗಾಂವ್‌ನಲ್ಲಿ ಸತತ 2ನೇ ದಿನವೂ ಮಾರಾಟ ಸ್ಥಗಿತಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಈರುಳ್ಳಿಯನ್ನು 1 ಕ್ವಿಂಟಲ್‌ಗೆ ‘ಐತಿಹಾಸಿಕ’ 2,410 ರು. ದರ ನೀಡಿ ಖರೀದಿಸಲು ಕೇಂದ್ರ ಸರ್ಕಾರ ಮಂಗಳವಾರ ನಿರ್ಧರಿಸಿದೆ.
ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ ಮುಂಡೆ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ಪ್ರಕಟಿಸಿದ ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪೀಯೂಶ್ ಗೋಯಲ್, ‘ಈರುಳ್ಳಿ ದರ ನಿಯಂತ್ರಣಕ್ಕಾಗಿ ರಫ್ತಿನ ಮೇಲೆ ಸುಂಕ ಹೇರಲಾಗಿದೆ. ಆದರೆ ಇದರಿಂದ ರೈತರಿಗೆ ನಷ್ಟವಾಗದು. ಕೇಂದ್ರ ಸರ್ಕಾರ 1 ಕ್ವಿಂಟಾಲ್‌ಗೆ ಐತಿಹಾಸಿಕ 2410 ರು. ನೀಡಿ ಈರುಳ್ಳಿ ಖರೀದಿಸಲು ನಿರ್ಧರಸಿದೆ. ರಫ್ತು ಮಾಡಿದರೆ ರೈತರಿಗೆ 1 ಕ್ವಿಂಟಲ್‌ಗೆ ಸರಾಸರಿ 1800-1900 ರು. ಸಿಗಬಹುದು. ಆದರೆ ಅದಕ್ಕಿಂತ ಹೆಚ್ಚು ದರ ನೀಡಲು ಕೇಂದ್ರ ನಿರ್ಧರಿಸಿದೆ’ ಎಂದರು.
ಈರುಳ್ಳಿ ರಫ್ತಿಗೆ ಶೇ.40 ಸುಂಕ: ಮಹಾ ರೈತರು, ವರ್ತಕರ ತೀವ್ರ ಆಕ್ರೋಶ
‘ಈರುಳ್ಳಿ ಖರೀದಿಸುವಂತೆ ಕೇಂದ್ರದ ಎನ್‌ಸಿಸಿಎಫ್ ಹಾಗೂ ನ್ಯಾಫೆಡ್‌ಗೆ ನಾವು ಸೂಚಿಸಿದ್ದೇವೆ. ರೈತರು ವಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡದೇ ಲಾಸಲಗಾಂವ್ ಮಾರುಕಟ್ಟೆಯಲ್ಲಿ ಈರುಳ್ಳಿ ಮಾರಾಟ ಬಂದ್ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ