ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ 3,647 ಕೋಟಿ ರೂ. ಅನುದಾನ ನೀಡಿದ ಕೇಂದ್ರ ಸರ್ಕಾರ

Published : Jun 26, 2023, 06:11 PM ISTUpdated : Jun 26, 2023, 06:16 PM IST
ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ 3,647 ಕೋಟಿ ರೂ. ಅನುದಾನ ನೀಡಿದ ಕೇಂದ್ರ ಸರ್ಕಾರ

ಸಾರಾಂಶ

ದೇಶದ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಷೇಶ ನೆರವು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರಕ್ಕೆ ಬರೋಬ್ಬರಿ 3,647 ಕೋಟಿ ರೂಪಾಯಿ ಅನುದಾನವ್ನು ಬಿಡುಗಡೆ ಮಾಡಿದೆ.

ನವದೆಹಲಿ (ಜೂ.26): ದೇಶದ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಷೇಶ ನೆರವು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರಕ್ಕೆ ಬರೋಬ್ಬರಿ 3,647 ಕೋಟಿ ರೂಪಾಯಿ ಅನುದಾನವ್ನು ಬಿಡುಗಡೆ ಮಾಡಿದೆ.

ಕೇಂದ್ರದ 2023-24 ಹಣಕಾಸು ವರ್ಷದ ವಿಶೇಷ ಯೋಜನೆ ಅಡಿಯಲ್ಲಿ ಬಂಡವಾಳ ಹೂಡಿಕೆಗಾಗಿ 16 ರಾಜ್ಯಗಳಿಗೆ 56,415 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ಹಣಕಾಸು ಬಿಡುಗಡೆಗೊಳಿಸಲಾಗಿದೆ. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಮಹಿಳೆಯರಂತೆ ಉಚಿತ ಪ್ರಯಾಣ ಬೇಡ, ಬಸ್‌ನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅವಕಾಶ ಕೊಡಿ

ಈ ವಲಯಗಳಲ್ಲಿನ ಯೋಜನೆಗಳ ವೇಗವನ್ನು ಹೆಚ್ಚಿಸಲು ಹಾಗೂ ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ರಾಜ್ಯ ಪಾಲನ್ನು ಪೂರೈಸಲು ಈ ಯೋಜನೆಯಡಿಯಲ್ಲಿ ರಾಜ್ಯಗಳಿಗೆ ಹಣವನ್ನು ಒದಗಿಸಲಾಗಿದೆ. 2023-24 ರ ಕೇಂದ್ರ ಬಜೆಟ್‌ನಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24 ಯೋಜನೆಯನ್ನು ಘೋಷಿಸಲಾಗಿತ್ತು. ಇದೀಗ ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಯಂತೆ  ಹಣ ಬಿಡುಗಡೆ ಮಾಡಲಾಗಿದೆ.

  • ದೇಶದ 16 ರಾಜ್ಯಗಳಿಗೆ ಕೇಂದ್ರದಿಂದ ಬಿಡುಗಡೆಯಾದ ಮೊತ್ತ
  • ಕರ್ನಾಟಕ : 3647 ಕೋಟಿ 
  • ಅರುಣಾಚಲ ಪ್ರದೇಶ : 1255 ಕೋಟಿ 
  • ಬಿಹಾರ : 9640 ಕೋಟಿ 
  • ಛತ್ತೀಸ್‌ಗಢ: 3195 ಕೋಟಿ 
  • ಗೋವಾ : 386 ಕೋಟಿ 
  •  ಗುಜರಾತ್: 3478 ಕೋಟಿ 
  • ಹರಿಯಾಣ: 1093 ಕೋಟಿ 
  • ಹಿಮಾಚಲ ಪ್ರದೇಶ: 826 ಕೋಟಿ 
  • ಮಧ್ಯಪ್ರದೇಶ: 7850 ಕೋಟಿ 
  • ಮಿಜೋರಾಂ: 399 ಕೋಟಿ
  • ಒಡಿಶಾ: 4528 ಕೋಟಿ 
  • ರಾಜಸ್ಥಾನ: 6026 ಕೋಟಿ 
  • ಸಿಕ್ಕಿಂ: 388 ಕೋಟಿ
  • ತಮಿಳುನಾಡು: 4079 ಕೋಟಿ
  • ತೆಲಂಗಾಣ: 2102 ಕೋಟಿ 
  • ಪಶ್ಚಿಮ ಬಂಗಾಳ: 7523 ಕೋಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!