ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸೌಲಭ್ಯ ಹೆಚ್ಚಿಸಿದ ಕೇಂದ್ರ ಸರ್ಕಾರ!

By Suvarna NewsFirst Published Mar 19, 2021, 2:43 PM IST
Highlights

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ನಿವೃತ್ತಿಯ ನಂತರದ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಗಣನೀಯವಾಗಿ ಹೆಚ್ಚಿಸಿದೆ. ಕೇಂದ್ರ ಕಾನೂನು ಸಚಿವಾಲಯ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ಅಧಿಸೂಚನೆ ಪ್ರಕಾರ ಮಾಸಾಶನ ಸೇರಿದಂತೆ ಹಲವು ಗೌರವ ಧನಗಳನ್ನು ಹೆಚ್ಚಿಸಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನವದೆಹಲಿ(ಮಾ.19):  ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ನಿವೃತ್ತಿಯ ನಂತರದ ಪ್ರಯೋಜನಗಳನ್ನು ಹೆಚ್ಚಿಸಲು ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಇದರ ಅನುಸಾರ ನಿವೃತ್ತಿ ಬಳಿಕ ನ್ಯಾಯಾಧೀಶರ ಮಾಸಾಶನ ಸೇರಿದಂತೆ ಕೆಲ ಪ್ರಯೋಜನಗಳನ್ನು ಹೆಚ್ಚಿಸಿದೆ.

ರೇಪಿಸ್ಟ್‌’ ಜಾಮೀನಿಗೆ ರಾಖಿ ಷರತ್ತು : ಹೈ ಆದೇಶ ಸುಪ್ರೀಂನಲ್ಲಿ ವಜಾ

ಹೊಸ ಅಧಿಸೂಚನೆ ಪ್ರಕಾರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಗೆ ಪ್ರತಿ ತಿಂಗಳ 39,000 ಸಿಗಲಿದೆ. ಸದ್ಯ ಪ್ರತಿ ತಿಂಗಳು 14,000 ರೂಪಾಯಿ ಮಾತ್ರ ಸಿಗುತ್ತಿದೆ. ಇನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತಿಯಾದವರಿಗೆ ಪ್ರತಿ ತಿಂಗಳು 70,000 ರೂಪಾಯಿಗೆ ಹೆಚ್ಚಿಸಲಾಗಿದೆ. ಸದ್ಯ ನಿವೃತ್ತಿ ಮುಖ್ಯ ನ್ಯಾಯಮೂರ್ತಿಗಳು 25,000 ರೂಪಾಯಿ ಸಿಗುತ್ತಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿಯಮ 1959 ರ 3 ಬಿ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತರಲಾಗಿದೆ. ಇದರ ಜೊತೆಗೆ ಇತರ ಕೆಲ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 

click me!