
ನವದೆಹಲಿ: 3 ಲಕ್ಷ ರು.ವರೆಗಿನ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಹಣಕಾಸು ಸಂಸ್ಥೆಗಳಿಗೆ ಹೆಚ್ಚುವರಿ ಶೇ.1.5ರಷ್ಟು ಬಡ್ಡಿ ಸಬ್ಸಿಡಿ ವಿತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ಕೃಷಿ ವಲಯಕ್ಕೆ ಸಾಲದ ಸರಾಗ ಹರಿವಿಗೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳಿಗೂ ಹೆಚ್ಚುವರಿಯಾಗಿ ಶೇ.1.5ರಷ್ಟುಬಡ್ಡಿ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ.
ಈ ಯೋಜನೆ ಅನ್ವಯ 3 ಲಕ್ಷ ರು.ವರೆಗೆ ಅಲ್ಪಾವಧಿ ಕೃಷಿ ಸಾಲ ಪಡೆಯುವ ರೈತರು ಶೇ.7ರಷ್ಟುಬಡ್ಡಿ ಪಾವತಿಸಬೇಕಾಗುತ್ತದೆ. ಆದರೆ ಕಾಲಮಿತಿಯಲ್ಲಿ ಹಣ ಪಾವತಿಸಿದರೆ ಶೇ.3ರಷ್ಟುಬಡ್ಡಿ ರಿಯಾಯಿತಿ ಸಿಗುತ್ತದೆ. ಅಂದರೆ ರೈತರಿಗೆ ಶೇ.4ರ ಬಡ್ಡಿದರದಲ್ಲಿ ಸಾಲ ಸಿಗುತ್ತದೆ.
ಕೃಷಿ ಸಾಲಕ್ಕೆ ಕೇಂದ್ರದಿಂದ ಬಂಪರ್: ಹೆಚ್ಚುವರಿ ಶೇ.1.5 ಬಡ್ಡಿ ಸಬ್ಸಿಡಿ
ಆದರೆ ಇತ್ತೀಚಿನ ದಿನಗಳಲ್ಲಿ ಬಡ್ಡಿದರ ಹೆಚ್ಚಾದ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಗಳಿಗೆ ಶೆ.1.5ರಷ್ಟುಬಡ್ಡಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಸಬ್ಸಿಡಿಯು, ಸರ್ಕಾರಿ, ಖಾಸಗಿ, ಸಣ್ಣ ಹಣಕಾಸು ಬ್ಯಾಂಕ್‌ಗಳು, ಪ್ರಾಂತೀಯ ಗ್ರಾಮೀಣ ಬ್ಯಾಂಕ್‌ಗಳು, ಸಹಕಾರ ಬ್ಯಾಂಕ್‌ಗಳು ಮತ್ತು ಕಂಪ್ಯೂಟರೀಕೃತ ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಗಳಿಗೂ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಈ ಯೋಜನೆ ಜಾರಿಗೆ 2022-23 ರಿಂದ 2024-25 ಅವಧಿಗೆ ಹೆಚ್ಚುವರಿ 34856 ಕೋಟಿ ರು. ಬಜೆಟ್ ಅನುದಾಗ ಬೇಕಾಗಲಿದೆ ಎಂದು ಸರ್ಕಾರ ಹೇಳಿದೆ.
10 ವರ್ಷ ಬಡ್ಡಿ ರಿಯಾಯ್ತಿ ಪಡೆದ ರೈತರಿಗೆ ಸಬ್ಸಿಡಿ ಕೃಷಿ ಸಾಲ ಇಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ