ಜನರ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಉತ್ಪನ್ನ ಬಿಡುಗಡೆ

By Kannadaprabha NewsFirst Published Sep 4, 2020, 2:23 PM IST
Highlights

ದೇಶದಲ್ಲಿ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಈ ನಿಟ್ಟಿನಲ್ಲಿ ಜನರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ 8 ಉತ್ಪನ್ನಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನವದೆಹಲಿ (ಸೆ.04) : ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ 8 ನ್ಯೂಟ್ರಾಸ್ಯುಟಿಕಲ್‌ (ಪೋಷಕಾಂಶಯುಕ್ತ) ಉತ್ಪನ್ನಗಳನ್ನು ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. ಈ ಉತ್ಪನ್ನಗಳನ್ನು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಅಡಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಜನೌಷಧಿ ಕೇಂದ್ರಗಳಲ್ಲಿ ಮಾರಾಟಕ್ಕೆ ಲಭ್ಯ ಇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಈ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳಿಗೆ ಹೋಲಿಸಬಹುದಾದ ಗುಣಮಟ್ಟಹಾಗೂ ಶೇ.26ರಷ್ಟುಕಡಿಮೆ ದರವನ್ನು ಹೊಂದಿವೆ. ಇದರಲ್ಲಿ ಪ್ರೋಟೀನ್‌ಯುಕ್ತ ದ್ರವ್ಯಗಳು, ಪೌಷ್ಟಿಕ ಪಾನೀಯಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಬಿಸ್ಕೆಟ್‌ಗಳು ಸೇರಿವೆ.

ಪಿಸಿಒಎಸ್‌ ಬಂದದ್ದೇ ಹೆಲ್ದೀ ಹುಡ್ಗಿಯಾದೆ; ಸೆಪ್ಟೆಂಬರ್‌ ಪಾಲಿಸಿಸ್ಟಿಕ್‌ ಒವೇರಿಯನ್‌ ಸಿಂಡ್ರೋಮ್‌ ತಿಂಗಳು! .

ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ಜನೌಷಧಿ ಕೇಂದ್ರಗಳಲ್ಲಿ ಕೈಗೆಟುಕವ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದೆ. ದೇಶದಲ್ಲಿ 6,500ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.

click me!