ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವ ಜವಾಬ್ದಾರಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕೇಂದ್ರದ ಘೋಷಣೆ

Published : Jul 25, 2026, 08:28 PM ISTUpdated : Jul 25, 2026, 08:42 PM IST
Pralhad Joshi

ಸಾರಾಂಶ

ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವ ಜವಾಬ್ದಾರಿ ನೀಡಲಾಗಿದೆ. ಧರ್ಮೇಂದ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಜೋಶಿಗ ಹೆಚ್ಚುವರಿ ಹೊಣೆ ನೀಡಲಾಗಿದೆ.

ನವದೆಹಲಿ (ಜು.25) ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಮಹತ್ವದ ಘಟ್ಟ ತಲುಪಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಈ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿಗೆ ನೀಡಲಾಗಿದೆ. ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರುವ ಪ್ರಹ್ಲಾದ್ ಜೋಶಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಇದೀಗ ಇಡೀ ದೇಶದ ಚಿತ್ತ ಪ್ರಲ್ಹಾದ್ ಜೋಶಿ ಮೇಲೆ ನೆಟ್ಟಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿ, ಆಹಾರ ಮತ್ತು ನಾಗರೀಕಾ ಸೇರಿದಂತೆ ಪ್ರಮುಖ ಇಲಾಖೆಗಳನ್ನು ನಿಭಾಯಿಸುತ್ತಿದ್ದಾರೆ. ಇದರ ಜೊತೆಗೆ ಶಿಕ್ಷಣ ಸಚಿವ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಕಳೆದ ಬಾರಿ ಕಲ್ಲಿದಲ್ಲು, ಗಣಿ ಹಾಗೂ ಸಂಸದೀಯ ವ್ಯವಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮೋದಿ ಸರ್ಕಾರದಲ್ಲಿ ಪ್ರಮುಖ ನಾಯಕನಾಗಿ, ಸಚಿವನಾಗಿ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಶಿಗೆ ಇದೀಗ ಇಡೀ ದೇಶವೇ ಕಣ್ಣಿಟ್ಟಿರುವ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದೆ.

ರಾಷ್ಟ್ರೀಯ ಗ್ರೀನ್ ಹೈಡ್ರೋಜನ್ ಮಿಷನ್, ಸೂರ್ಯ ಘರ್ ಮುಫ್ತಿ ಬಿಜಲಿ ಯೋಜನಾ ಸೇರಿದಂತೆ ಪ್ರಮುಖ ಯೋಜನೆಗಳ ಹಿಂದೆ ಅವರಿತ ಶ್ರಮವಹಿಸಿರುವ ಪ್ರಲ್ಹಾದ್ ಜೋಶಿ ಇದೀಗ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನೀಟ್ ಪರೀಕ್ಷೆ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿನ ಮಹತ್ವದ ಬದಲಾವಣೆ ಆಗ್ರಹ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜೋಶಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಹ್ಲಾದ್ ಜೋಶಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಇಂದು (ಜು.25) ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಕ್ರೋಚ್ ಜನತಾ ಪಾರ್ಟಿ, ನೀಟ್ ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ ನಡೆದ ಪ್ರತಿಭಟನೆ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ದೇಶವ್ಯಾಪಿ ಹರಡಿತ್ತು. ಕಾಕ್ರೋಚ್ ಜನತಾ ಪಾರ್ಟಿ ಸೇರಿದಂತೆ ವಿದ್ಯಾರ್ಥಿ ಸಮೂಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಪಟ್ಟು ಬಿಗಿಗೊಳಿಸಿದ್ದರು. ಒತ್ತಡಗಳು ತೀವ್ರಗೊಳ್ಳುತ್ತಿದ್ದಂತೆ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಕಂಗ್ರಾಟ್ಸ್ ಮೈ ಡಿಯರ್ ಕಾಕ್ರೋಚ್ಸ್‌..' ಧಮೇಂದ್ರ ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಹೇಳಿದ್ದೇನು?
ಟೈಗರ್ ಹಿಲ್‌ನಿಂದ ಆಪರೇಷನ್ ಸಿಂದೂರ್‌ವರೆಗೆ: ಕಾರ್ಗಿಲ್ ಕಟ್ಟಿದ್ದೇನು?