
ನವದೆಹಲಿ : ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿ ಸಾವಿರಾರು ಪ್ರಯಾಣಿಕರು ಪರದಾಡುತ್ತಿರುವ ನಡುವೆಯೇ, ರದ್ದಾದ ವಿಮಾನಗಳ ಟಿಕೆಟ್ ಮೊತ್ತವನ್ನು ಭಾನುವಾರ ಸಂಜೆಯೊಳಗೆ ಗ್ರಾಹಕರಿಗೆ ಮರುಪಾವತಿ ಮಾಡಬೇಕು ಮತ್ತು ಮುಂದಿನ 2 ದಿನಗಳಲ್ಲಿ ಅವರವರ ಬ್ಯಾಗ್‌ಗಳನ್ನು ಸುರಕ್ಷಿತವಾಗಿ ತಲುಪಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಇಂಡಿಗೋ ಏರ್‌ಲೈನ್ಸ್‌ಗೆ ನಿರ್ದೇಶಿಸಿದೆ.
ಪೈಲಟ್‌ಗಳ ಕೊರತೆಯಿಂದ ಶನಿವಾರವೂ 400ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದಾಯಿತು. ಈ ಹಿನ್ನೆಲೆ ಸೂಚನೆ ನೀಡಿರುವ ಸಚಿವಾಲಯ, ‘ರದ್ದಾದ ಅಥವಾ ವಿಳಂಬವಾದ ವಿಮಾನಗಳ ಟಿಕೆಟ್ ಮೊತ್ತ ಮರುಪಾವತಿ ಪ್ರಕ್ರಿಯೆಯನ್ನು ಭಾನುವಾರ ರಾತ್ರಿ 8 ಗಂಟೆಯೊಳಗೆ ಪೂರ್ಣಗೊಳಿಸಬೇಕು.
ಮರು ಟಿಕೆಟ್ ಬುಕಿಂಗ್ ಮಾಡುವಾಗ ಯಾವುದೇ ಶುಲ್ಕ ವಿಧಿಸಬಾರದು. ಮುಂದಿನ 48 ಗಂಟೆಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಅವರಿಗೆ ತಲುಪಿಸಬೇಕು. ಪ್ರಯಾಣಿಕರ ಸಹಾಯಕ್ಕಾಗಿಯೇ ತಂಡವೊಂದನ್ನು ರಚಿಸಬೇಕು. ಅವರು ಪ್ರಯಾಣಿಕರಿಗೆ ಮರುಪಾವತಿ, ಪರ್ಯಾಯ ಪ್ರಯಾಣ ವ್ಯವಸ್ಥೆ ಇತ್ಯಾದಿ ಅಗತ್ಯ ನೆರವು ಕಲ್ಪಿಸಬೇಕು’ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ