
ನವದೆಹಲಿ (ಆ.8): ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪಪ್ರಚಾರ ಹಾಗೂ ಕಾನೂನುಬಾಹಿರ ವಿಷಯಗಳನ್ನು ತಡೆಯಲು ಅಲ್ಗಾರಿದಂಗಳಲ್ಲಿ ಸೂಕ್ತ ಬದಲಾವಣೆ ಮಾಡುವ ಮೂಲಕ ಸ್ಪಷ್ಟವಾದ ಕ್ರಿಯಾ ಯೋಜನೆಯನ್ನು (ರೋಡ್‌ಮ್ಯಾಪ್) ಸಲ್ಲಿಸುವಂತೆ ಕೇಂದ್ರ ಸರ್ಕಾರವು ಮೆಟಾ ಸಂಸ್ಥೆಗೆ ಸೂಚನೆ ನೀಡಿದೆ.
ದೇಶದಲ್ಲಿ ಮೆಟಾ ಒಡೆತನದ ವೇದಿಕೆಗಳಾದ ಫೇಸ್ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ಗಳ ಮೂಲಕ ಹರಡುತ್ತಿರುವ ಡೀಪ್‌ಫೇಕ್‌ಗಳು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳು ಮತ್ತು ನಕಲಿ ಖಾತೆಗಳ ಹಾವಳಿಯಂತಹ ಗಂಭೀರ ಸಮಸ್ಯೆಗಳ ಕುರಿತು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕದ ಕಾನೂನುಗಳ ಆಧಾರದ ಮೇಲೆ ಭಾರತದಲ್ಲಿ ಜಾಲತಾಣಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸರ್ಕಾರ, ಇಲ್ಲಿನ ಕಾನೂನುಗಳು ಮತ್ತು ಸಾರ್ವಜನಿಕ ಸುರಕ್ಷತೆಗೆ ಎಲ್ಲಾ ಪ್ಲಾಟ್‌ಫಾರ್ಮ್‌ಗಳು ಬದ್ಧವಾಗಿರಬೇಕು ಎಂದು ಒತ್ತಾಯಿಸಿದೆ.
ಕಂಟೆಂಟ್ ಮಾಡರೇಷನ್, ನಿಯಮಗಳ ಪಾಲನಾ ವ್ಯವಸ್ಥೆಗಳು ಮತ್ತು ಬಳಕೆದಾರರ ಸುರಕ್ಷತಾ ಕ್ರಮಗಳ ಸಂಪೂರ್ಣ ವಿವರಗಳನ್ನು ಒದಗಿಸುವಂತೆ ಮೆಟಾ ಕಂಪನಿಗೆ ನಿರ್ದೇಶಿಸಲಾಗಿದೆ. ಭಾರತೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಡಿಜಿಟಲ್ ವೇದಿಕೆಗಳನ್ನು ಸುರಕ್ಷಿತವಾಗಿರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ