
ನವದೆಹಲಿ (ನ. 09): ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಯೋಧರು ವರ್ಷದಲ್ಲಿ ಕನಿಷ್ಠ 100 ದಿನ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ನೀಡಬೇಕು ಎನ್ನುವ ಪ್ರಸ್ತಾಪಕ್ಕೆ ಕೇಂದ್ರ ಗೃಹ
ಸಚಿವ ಅಮಿತ್ ಶಾ ನಿರ್ದೇಶನದಂತೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ಗಳು ಶುಕ್ರವಾರ ತಿಳಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಗೆ 820 ಕೋಟಿ ವ್ಯಯಿಸಿದ ಕೈ!
ಸಿಆರ್‌ಪಿಎಫ್ ಹೆಚ್ಚುವರಿ ನಿರ್ದೇಶಕ ಅತುಲ್ ಕರ್ವಾಲ್ ನೇತೃತ್ವದಲ್ಲಿ 7 ಮಂದಿ ಸಮಿತಿ ರಚಿಸಲಾಗಿದ್ದು, ಪ್ರತೀ ಕೇಂದ್ರ ಶಸ್ತ್ರಾಸ್ತ್ರ ದಳದ ಒಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. 4 ವಾರದೊಳಗೆ ವರದಿ ನೀಡಲು ಸೂಚಿಸಲಾಗಿದ್ದು, ಇದು ಜಾರಿ ಆದರೆ, 7 ಲಕ್ಷ ಯೋಧರಿಗೆ ಉಪಯೋಗವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ