ಕಾಶ್ಮೀರದಿಂದ 10000 ಯೋಧರ ಹಿಂಪಡೆಯಲು ಕೇಂದ್ರ ಸರ್ಕಾರ ಆದೇಶ

By Kannadaprabha NewsFirst Published Aug 20, 2020, 1:27 PM IST
Highlights

ಜಮ್ಮು ಮತ್ತು ಕಾಶ್ಮೀರದಿಂದ 10,000 ಪ್ಯಾರಾಮಿಲಿಟರಿ ಪಡೆಗಳನ್ನು ತಕ್ಷಣ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಬುಧವಾರ ಆದೇಶ ಮಾಡಿದೆ. 

ನವದೆಹಲಿ(ಆ.20): ಜಮ್ಮು ಕಾಶ್ಮೀರದಲ್ಲಿ ನಿಯೋಜಿಸಲಾದ 10,000 ಪ್ಯಾರಾಮಿಲಿಟರಿ ಪಡೆಗಳನ್ನು ತಕ್ಷಣ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಬುಧವಾರ ಆದೇಶ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ(ಸಿಎಪಿಎಫ್‌)ಗಳ ನಿಯೋಜನೆಯಾದ ಹಿನ್ನೆಲೆಯಲ್ಲಿ ಕೇಂದ್ರ  ಗೃಹ ಸಚಿವಾಲಯ ಪರಿಶೀಲನೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

18ನೇ ವಯಸ್ಸಿಗೆ ಸೈನಿಕನಾದ, 24ನೇ ವಯಸ್ಸಿಗೆ ದೇಶಕ್ಕಾಗಿ ಪ್ರಾಣ ಅರ್ಪಿಸಿದ ಯೋಧ!...

ಕಳೆದ ವರ್ಷ 370ನೇ ವಿಧಿ ರದ್ದುಗೊಳಿಸುವ ಸಂದರ್ಭದಲ್ಲಿ ಸುರಕ್ಷತೆ ದೃಷ್ಟಿಯಿಂದ ಪ್ಯಾರಾಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು.

ಇದೀಗ ಮತ್ತೊಮ್ಮೆ ಜಮ್ಮು ಕಾಶ್ಮೀರದಿಂದ ಸೇನಾ ಪಡೆ ವಾಪಸ್‌ಗೆ ಆದೇಶ ನೀಡಲಾಗಿದೆ.

click me!