18​-45ಮೇಲ್ಪಟ್ಟವರಿಗೆ 122 ಕೋಟಿ ಡೋಸ್‌ ಲಸಿಕೆ ಬೇಕು!

By Kannadaprabha News  |  First Published May 3, 2021, 9:12 AM IST

18​-45ರ ವಯೋಮಾನದ 59 ಕೋಟಿ ಜನರಿಗೆ 122 ಕೋಟಿ ಡೋಸ್‌ ಲಸಿಕೆ ಬೇಕು: ಕೇಂದ್ರ| ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿರುವ ಕೇಂದ್ರ ಸರ್ಕಾರ


ನವದೆಹಲಿ(ಮೇ.03): 18ರಿಂದ 45 ವರ್ಷ ವಯಸ್ಸಿನ 59 ಕೋಟಿ ಜನರಿಗೆ ಲಸಿಕೆಯನ್ನು ನೀಡಲು 122 ಕೋಟಿ ಡೋಸ್‌ ಲಸಿಕೆ ಬೇಕಾಗಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿರುವ ಕೇಂದ್ರ ಸರ್ಕಾರ, ಲಸಿಕೆ ನೀಡುವುದು ಸರ್ಕಾರದ ಅತ್ಯುನ್ನತ ಆದ್ಯತೆ ಆಗಿದ್ದು, ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೇ.100ರಷ್ಟುಗುರಿಯನ್ನು ಸಾಧಿಸಲು ಎಲ್ಲಾ ರೀತಿಯ ಯತ್ನಗಳನ್ನು ಮಾಡಲಾಗುತ್ತಿದೆ.

Latest Videos

undefined

"

ದೇಶದಲ್ಲಿ ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆಗಳು ಈಗ ಲಭ್ಯವಿದೆ. ಇದರ ಜೊತೆಗೆ ರಷ್ಯಾದ ಸ್ಪುಟ್ನಿಕ್‌-5 ಲಸಿಕೆಗೂ ಅನುಮತಿ ನೀಡಲಾಗಿದೆ. ಜುಲೈ- ಆಗಸ್ಟ್‌ ವೇಳೆಗೆ ಸ್ಥಳೀಯವಾಗಿ ಉತ್ಪಾದನೆ ಆದ ಸ್ಪುಟ್ನಿಕ್‌ ಲಸಿಕೆಯ 80 ಲಕ್ಷದಿಂದ 1.6 ಕೋಟಿ ಡೋಸ್‌ಗಳು ಲಭ್ಯವಾಗುವ ನಿರೀಕ್ಷೆ ಇದೆ. ಅದೇ ರೀತಿ ಫೈಝರ್‌, ಮಾಡೆರ್ನಾ, ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪನಿಗಳ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!