ಸೋಮವಾರ ಕರ್ನಾಟಕ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಇದರ ವಿಚಾರಣ ನಡೆಸುವ ವೇಳೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.
ನವದೆಹಲಿ (ಮೇ.6): ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ ಹಣಕಾಸು ನೆರವು ಬಿಡುಗಡೆ ಮಾಡಿರುವುದು , ಸಂವಿಧಾನ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ಗೃಹ ಸಚಿವಾಲಯ ಹೊರಡಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ ಆಡಳಿತದ ಮಾರ್ಗಸೂಚಿಗಳಿಗೆ ಕಟ್ಟುನಿಟ್ಟಾಗಿ ಅನುಗುಣವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ಎನ್‌ಡಿಆರ್‌ಎಫ್ ಅಡಿಯಲ್ಲಿನ ಸಹಾಯದ ಅಂಶಗಳು ಮತ್ತು ಮಾನದಂಡಗಳು ಮತ್ತು ಐಎಂಸಿಟಿಯ ವರದಿಯ ಆಧಾರದ ಮೇಲೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಉಪ ಸಮಿತಿಯ ಶಿಫಾರಸಿನೊಂದಿಗೆ ಕೇಂದ್ರೀದಮ ಹಣಕಾಸಿನ ನೆರವು ಬಿಡುಗಡೆ ಮಾಡಲಾಗಿದೆ" ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯಿದೆ, 2005 ರ ಚೌಕಟ್ಟಿಗೆ ಅನುಗುಣವಾಗಿ ಮತ್ತು ಕಾಯಿದೆಯಡಿಯಲ್ಲಿ ತಿಳಿಸಲಾದ ನಿಯಮಗಳು ಮತ್ತು ತತ್ವಗಳಿಗೆ ಅನುಗುಣವಾಗಿ ಭಾರತ ಒಕ್ಕೂಟವು ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದೆ.
ಸೋಮವಾರ ಕರ್ನಾಟಕ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪ್ರಕರಣದ ವಿಚಾರಣೆ ನಡೆಸಿದೆ. ಹಿರಿಯ ವಕೀಲ ಕಪಿಲ್ ಸಿಬಲ್, ಕೇಂದ್ರದ ಸ್ವಂತ ನೀತಿಯ ಪ್ರಕಾರ ಅದು ಒದಗಿಸಿದ ಡೇಟಾವನ್ನು ಪರಿಗಣಿಸುವ ಅಗತ್ಯವಿರುವುದರಿಂದ ರಾಜ್ಯ ಸರ್ಕಾರವು ಪ್ರಕರಣದಲ್ಲಿ ಅಫಿಡವಿಟ್ ಸಲ್ಲಿಸುತ್ತದೆ ಎಂದು ಹೇಳಿದ್ದರು.ಬೇಸಿಗೆ ರಜೆಯ ನಂತರ ಈ ವಿಷಯವನ್ನು ಪರಿಗಣಿಸಲು ನ್ಯಾಯಾಲಯ ನಿಗದಿಪಡಿಸಿದೆ.
ಏಪ್ರಿಲ್ 29 ರಂದು, ನ್ಯಾಯಾಲಯವು ಕರ್ನಾಟಕದ ಬರ ಪರಿಹಾರ ಅರ್ಜಿಯನ್ನು ಪರಿಗಣನೆ ಮಾಡುವಂತೆ ತಿಳಿಸಿತ್ತು. ಆಗ ನ್ಯಾಯಾಲಯವು ವರದಿಯನ್ನು ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳುವಂತೆಯೂ ಸೂಚನೆ ನೀಡಿತ್ತು. ಬರ ಪರಿಹಾರಕ್ಕಾಗಿ ಕೇಂದ್ರ 3,454 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದು ತಮಗೆ ಸಾಲೋದಿಲ್ಲ ಆಗೂ ನಾವು ಕೇಳಿದ್ದಕ್ಕಿಂತ ಬಹಳ ಕಡಿಮೆ ಎಂದು ಕರ್ನಾಟಕ ಸರ್ಕಾರ ವಾದ ಮಾಡಿತ್ತು. ಏಪ್ರಿಲ್ 26 ರಂದು ಕೇಂದ್ರವು ಬರ ಪರಿಹಾರಕ್ಕಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಪರಿಹಾರ ನೀಡಿತ್ತು.
ಬರ ಪರಿಹಾರವಾಗಿ 3,498.82 ಕೋಟಿ ರೂಪಾಯಿ ಬಿಡುಗಡೆಗೆ ಉನ್ನತಾಧಿಕಾರ ಸಮಿತಿ ಅನುಮೋದನೆ ನೀಡಿದೆ ಆದರೆ 40.60 ಕೋಟಿ ರೂಪಾಯಿ ಈಗಾಗಲೇ ರಾಜ್ಯ ವಿಪತ್ತು ಸ್ಪಂದನಾ ನಿಧಿಯಡಿ ರಾಜ್ಯದಲ್ಲಿ ಇರುವುದರಿಂದ 3,454.22 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿತ್ತು.
ಬಿಜೆಪಿಯ ಯಾವೊಬ್ಬ ಸಂಸದನೂ ಬರ ಪರಿಹಾರ ನೀಡಿ ಎಂದು ಕೇಳಲಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು NDRF ಅಡಿಯಲ್ಲಿ ಸೆಪ್ಟೆಂಬರ್ 2023 ರಲ್ಲಿ ರಾಜ್ಯವು 18,174 ಕೋಟಿ ರೂಪಾಯಿ ಬರ ಪರಿಹಾರ ಮನವಿ ಮಾಡಿತ್ತು. ಈ ಮನವಿಯಲ್ಲಿ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು 5,662 ಕೋಟಿ ರೂಪಾಯಿ ನೀಡಬೇಕು ಎಂದು ತಿಳಿಸಲಾಗಿತ್ತು. ಕರ್ನಾಟಕವು 2023ರ ಸೆಪ್ಟೆಂಬರ್ 13 ರಂದು 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಬರದಿಂದಾಗಿ 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ, ಇದರ ಪರಿಣಾಮವಾಗಿ Rs 35,162 ಕೋಟಿ ನಷ್ಟವಾಗಿದೆ ಎಂದು ಹೇಳಿತ್ತು.
ಬರ ಪರಿಹಾರ ಶಿಫಾರಸು ವರದಿ ಸಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ