
ನವದೆಹಲಿ(ಜ.27): ರೈತರ ಟ್ರ್ಯಾಕ್ಟರ್ ರಾರಯಲಿ ಹಿಂಸಾ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಲ್ಲಿಯಲ್ಲಿ 15ರಿಂದ 20 ಅರೆಸೇನಾ ತುಕಡಿ ನಿಯೋಜನೆಗೆ ಸೂಚಿಸಿದ್ದಾರೆ.
ಮಂಗಳವಾರ ಸಂಜೆ ಶಾ ಅವರು ದೆಹಲಿ ಪೊಲೀಸರು ಹಾಗೂ ಗೃಹ ಸಚಿವಾಲಯದ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಅಧಿಕಾರಿಗಳ ಭದ್ರತಾ ಪರಿಶೀಲನೆ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾತ್ಸವ ಅವರು ಪರಿಸ್ಥಿತಿಯ ಮಾಹಿತಿ ನೀಡಿದರು.
ಇದರ ಬೆನಲ್ಲೇ, ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಸುಮಾರು 1,500ರಿಂದ 2,000 ಸಿಬ್ಬಂದಿಯನ್ನು ಒಳಗೊಂಡ 15ರಿಂದ 20 ತುಕಡಿಗಳನ್ನು ಭದ್ರತೆಗೆ ನಿಯೋಜಿಸುವಂತೆ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಗಣರಾಜ್ಯೋತ್ಸವಕ್ಕೂ ಮುನ್ನ ಕಾನೂನು ಸುವ್ಯವಸ್ಥೆ ಪಾಲನೆಗೆ ಈಗಾಗಲೇ 4,500ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ