ಸಂಸತ್ತಿನಲ್ಲಿ ನಮೋಗೆ ಚಪ್ಪಾಳೆಯ ಸ್ವಾಗತ; ಸಂಸದರಿಂದ 3ನೇ ಬಾರಿ ಮೋದಿ ಸರ್ಕಾರ ಘೋಷಣೆ

Published : Dec 04, 2023, 01:05 PM ISTUpdated : Dec 04, 2023, 01:06 PM IST
ಸಂಸತ್ತಿನಲ್ಲಿ ನಮೋಗೆ ಚಪ್ಪಾಳೆಯ ಸ್ವಾಗತ; ಸಂಸದರಿಂದ 3ನೇ ಬಾರಿ ಮೋದಿ ಸರ್ಕಾರ ಘೋಷಣೆ

ಸಾರಾಂಶ

ಮೂರು ಹೃದಯ ಭಾಗದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ಮೂರನೇ ಬಾರಿ ಮೋದಿ ಸರ್ಕಾರ ಹಾಗೂ ಮತ್ತೆ ಮತ್ತೆ ಮೋದಿ ಸರ್ಕಾರ ಎಂಬ ಘೋಷಣೆಗಳು ಪ್ರತಿಧ್ವನಿಸಿದೆ.

ಹೊಸದಿಲ್ಲಿ (ಡಿಸೆಂಬರ್ 4, 2023): ಇಂದು ಬೆಳಗ್ಗೆ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ ನೀಡಲಾಗಿದೆ. ಮೂರು ಹೃದಯ ಭಾಗದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ಸಂಸದರು ಘೋಷಣೆಗಳನ್ನು ಕೂಗಿದ್ದಾರೆ.

ಮೂರು ಹೃದಯ ಭಾಗದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ಮೂರನೇ ಬಾರಿ ಮೋದಿ ಸರ್ಕಾರ ಹಾಗೂ ಮತ್ತೆ ಮತ್ತೆ ಮೋದಿ ಸರ್ಕಾರ ಎಂಬ ಘೋಷಣೆಗಳು ಪ್ರತಿಧ್ವನಿಸಿದೆ. ಸಂಸತ್ತಿನ ಕಲಾಪ ಸೋಮವಾರ ಆರಂಭವಾಗಿದ್ದು, ಚಳಿಗಾಲದ ಅಧಿವೇಶನ ಶುರುವಾಗ್ತಿದ್ದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಬಿಜೆಪಿ ಸಂಸದರು ಈ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಕಮಲ ಕಿಲಕಿಲ: ಷೇರುಪೇಟೆಯಲ್ಲಿ ಭರ್ಜರಿ ಜಿಗಿತ; 15 ನಿಮಿಷದಲ್ಲಿ ಹರಿದುಬಂತು 4 ಲಕ್ಷ ಕೋಟಿ!

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಭಾವಿ ಪ್ರದರ್ಶನ ನೀಡಿದ್ದು, ಭಾನುವಾರ ಮತ ಎಣಿಕೆ ನಡೆದ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಕೇಸರಿ ಪಕ್ಷ ಮಧ್ಯಪ್ರದೇಶದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿ ಅಧಿಕಾರ ಉಳಿಸಿಕೊಂಡಿದ್ದಲ್ಲದೆ,  ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನಿಂದ ಯಶಸ್ವಿಯಾಗಿ ಅಧಿಕಾರವನ್ನು ಪಡೆದುಕೊಂಡಿದೆ. ಹಾಗೂ ಕ್ಷೇತ್ರಗಳ ವಿಷಯದಲ್ಲಿ ಗಣನೀಯ ಮುನ್ನಡೆ ಸಾಧಿಸಿತು.

ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ತಮ್ಮ ಸಂಪುಟದ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತಿದ್ದರು. ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರ ಹಿಂದೆ ಸಾಲು ಸಾಲಾಗಿ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಬಿಜೆಪಿಯು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ ಅಭ್ಯರ್ಥಿಗಳನ್ನು ಬಿಂಬಿಸದೆ ಪ್ರಧಾನಿ ಮೋದಿಯವರನ್ನು ಮಾತ್ರ ಪಕ್ಷದ ಮುಖವಾಗಿ ಬಿಂಬಿಸುವ ಸಾಮೂಹಿಕ ನಾಯಕತ್ವದಲ್ಲಿ ಸ್ಪರ್ಧಿಸಿದೆ.

ತೆಲಂಗಾಣದಲ್ಲಿ ಬದಲಾಗ್ತಿದೆ ಸರ್ಕಾರ: ರೇವಂತ್ ರೆಡ್ಡಿ, ಕೆಟಿಆರ್‌ಗೆ ಯುಕೆ ಡೆಪ್ಯುಟಿ ಹೈ ಕಮಿಷನರ್ ಪೋಸ್ಟ್‌ ವೈರಲ್‌!

ಮೂರು ಹೃದಯ ಭಾಗದ ರಾಜ್ಯಗಳು ಮತ್ತು ದಕ್ಷಿಣದ ಒಂದು ರಾಜ್ಯ ಚುನಾವಣಾ ಫಲಿತಾಂಶಗಳನ್ನು ಘೋಷಿಸಿದ ಒಂದು ದಿನದ ನಂತರ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಬಿಜೆಪಿಯು ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೆ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಿತು. 

10 ವರ್ಷಗಳ ನಂತರ ಭಾರತ್ ರಾಷ್ಟ್ರ ಸಮಿತಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್ ತೆಲಂಗಾಣವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚಳಿಗಾಲದ ಅಧಿವೇಶನವು ಡಿಸೆಂಬರ್ 22 ರವರೆಗೆ ನಡೆಯಲಿದೆ. 

ಇದನ್ನು ಓದಿ: ಈಶಾನ್ಯ ಮಿಜೋರಾಂನಲ್ಲಿ ZPM ಮ್ಯಾಜಿಕ್‌; ಮೋದಿ ದೂರ ಮಾಡಿಕೊಂಡ MNFಗೆ ಕೈ ತಪ್ಪುತ್ತಾ ಅಧಿಕಾರ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್