ಲಸಿಕೆ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ರಾಜೀವ್ ಚಂದ್ರಶೇಖರ್ ಗರಂ!

Published : Apr 28, 2021, 08:01 PM IST
ಲಸಿಕೆ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ರಾಜೀವ್ ಚಂದ್ರಶೇಖರ್ ಗರಂ!

ಸಾರಾಂಶ

ಕೊರೋನಾ ವೈರಸ್ ಕುರಿತ ಹಲವು ಸುಳ್ಳು ಸುದ್ಧಿಗಳು, ವಿಡಿಯೋಗಳು ಈಗಾಗಲೇ ಹರಿದಾಡುತ್ತಿದೆ. ಇದನ್ನೇ ಮೂಲವಾಗಿಟ್ಟುಕೊಂಡು ಅವಾಂತರಗಳನ್ನೇ ಸೃಷ್ಟಿಸಲಾಗುತ್ತಿದೆ.  ಇದೀಗ ಈ ರೀತಿ ಬೇಜವಾಬ್ದಾರಿಯುತ ಮಾಧ್ಯಮ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಗರಂ ಆಗಿದ್ದಾರೆ. ಇಷ್ಟೇ ಅಲ್ಲ ಸುಳ್ಳಿನ ಬಂಡವಾಳವನ್ನು ಬಯಲು ಮಾಡಿದ್ದಾರೆ

ನವದೆಹಲಿ(ಏ.26): ಕೊರೋನಾ ವೈರಸ್ ದೇಶದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ತಂದಿಟ್ಟಿದೆ. ಆದರೆ ಇದೇ ಸಂದರ್ಭವನ್ನು ಬಳಸಿಕೊಂಡು ಹಲವರು ಸುಳ್ಳು ಸುದ್ದಿಗಳನ್ನು ಹರಡಿ ಜನರಲ್ಲಿ ಮತ್ತಷ್ಟು ಆತಂಕವನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಕೆಲ ಮಾಧ್ಯಮಗಳು ಲಸಿಕೆಯಿಂದ ಅಪಾಯ ಹೆಚ್ಚು, ಲಸಿಕೆ ಅನುಮೋದನೆ ರಾಜಕೀಯ ನಾಟಕ ಎಂಬ ಕೆಲ ಇಂಗ್ಲೀಷ್ ಮಾಧ್ಯಮ ವರದಿಗೆ ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಗರಂ ಆಗಿದ್ದಾರೆ.

ಸೋಂಕಿತರ ನೆರವಿಗೆ ಧಾವಿಸಿದ ರಾಜೀವ್ ಚಂದ್ರಶೇಖರ್; ಬೆಂಗಳೂರು ಪ್ರತಿಷ್ಠಾನದಿಂದ ಆಕ್ಸಿಜನ್ ಪೂರೈಕೆ!...

ಇಂಗ್ಲೀಷ್ ಮಾಧ್ಯಮವೊಂದು ಲಸಿಕೆ ಕುರಿತು ಸುಳ್ಳು ಸುದ್ದಿಯನ್ನು ಪ್ರಕಟಿಸಿದೆ. ಇದರಲ್ಲಿ ಕೋವಾಕ್ಸಿನ್ ಲಸಿಕೆಗ ಅನುಮತಿ ನೀಡಿರುವುದು ರಾಜಕೀಯ ನಾಟಕ. ಆತ್ಮನಿರ್ಭರ್ ಹೆಸರಲ್ಲಿ ಮಾಡಿದ ನಾಟಕ ಎಂದು ವರದಿ ಪ್ರಕಟಿಸಿದೆ. ಭಾರತೀಯರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದೆ. ಹೀಗಾಗಿ ಲಸಿಕೆಯಿಂದ ಭಾರತಕ್ಕೆ ಅಪಾಯ ಹೆಚ್ಚು ಎಂದು ವರದಿ ಪ್ರಕಟಿಸಿದೆ. ಈ ರೀತಿ ಸುಳ್ಳು ಸುದ್ದಿ ಕುರಿತು ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

 

ಇದು ಬೇಜವಾಬ್ದಾರಿ ಹಾಗೂ ಅಸಮರ್ಪಕ ಪತ್ರಿಕೋದ್ಯಮ. ವಿಜ್ಞಾನ ಹಾಗೂ ಔಷಧಿ ಕುರಿತ ಸತ್ಯವನ್ನು ಮರೆಮಾಚಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಕೊರೋನಾದಿಂದ ಮೃತರಾದ ಶೇಕಡಾ 99ರಷ್ಟು ಮಂದಿ ಲಸಿಕೆ ಹಾಕಿಲ್ಲ ಎಂದು ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ, ನಂದನ್ ನೀಲೆಕೆಣಿ, ರತನ್ ಟಾಟಾ ಸೇರಿದಂತೆ ಹಲವರು ಲಸಿಕೆ ನೆರವಾಗಲು ದೇಣಿಗೆ ನೀಡಿದರೆ, ಇದನ್ನೇ ಇತರರು ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ