ಮೋದಿಯನ್ನು ತುಂಡು ತುಂಡು ಮಾಡುವೆ ಎಂದ ಕೈ ಸಂಸದ ಇಮ್ರಾನ್‌ ವಿರುದ್ಧ ದೋಷಾರೋಪ

By Ravi Janekal  |  First Published Oct 24, 2024, 6:12 AM IST

ದೇವಬಂದ್ ಪೊಲೀಸ್ ಠಾಣಾ ವ್ಯಾಪ್ತಿಯ ಲ್ಯಾಬ್ಕರಿ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಸೂದ್ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಇಮ್ರಾನ್ ಮಸೂದ್ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ


ಸಹರಾನ್ಪುರ್ (ಅ.24): 2014ರಲ್ಲಿ ನರೇಂದ್ರ ಮೋದಿ ಗುಜರಾತ್‌ ಸಿಎಂ ಆಗಿದ್ದಾಗ ಅವರನ್ನು ತುಂಡು ತುಂಡು ಮಾಡುವೆ ಎಂದು ಹೇಳಿದ್ದ ಕಾಂಗ್ರೆಸ್‌ ಸಂಸದ ಇಮ್ರಾನ್ ಮಸೂದ್‌ ವಿರುದ್ಧ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿ ಆರೋಪ ಸಾಬೀತಾದರೆ 5-7 ವರ್ಷ ಶಿಕ್ಷೆ ಆಗುವ ಕಾಯ್ದೆಯನ್ನು ಹೊರಿಸಲಾಗಿದೆ. ಒಂದು ವೇಳೆ ಆರೋಪ ಸಾಬೀತಾದರೆ ಇಮ್ರಾನ್‌ ಸಂಸತ್‌ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

ಸಹರಾನ್‌ಪುರದ ಲಬ್ಕರಿ ಎಂಬಲ್ಲಿ ಮಾತನಾಡುವ ವೇಳೆ, ನನ್ನ ಕ್ಷೇತ್ರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಇದ್ದಾರೆ. ನಾವು ಬಯಸಿದರೆ ಮೋದಿಯನ್ನು ತುಂಡು ತುಂಡು ಮಾಡುತ್ತೇವೆ ಎಂದು ಅಬ್ಬರಿಸಿದ್ದರು. ಈ ಹೇಳಿಕೆ ವಿರುದ್ಧ ಕುಸುಮ್‌ ವೀರ್‌ ಸಿಂಗ್ ಎಂಬುವವರು ದೂರು ನೀಡಿದ್ದರು.

Tap to resize

Latest Videos

 2014 ರ ಲೋಕಸಭಾ ಚುನಾವಣೆಯಲ್ಲಿ ಸಹರಾನ್‌ಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಇಮ್ರಾನ್ ಮಸೂದ್. ಈ ವೇಳೆ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಕಾಶಿವಾಸಿಗಳಿಗೆ ಆಧುನಿಕ ನೇತ್ರ ಚಿಕಿತ್ಸಾಲಯ ಸಮರ್ಪಿಸಿದ ಪ್ರಧಾನಿ ಮೋದಿ

ವೈರಲ್ ವಿಡಿಯೋದಲ್ಲಿ ಏನಿದ?

ಸಹರಾನ್‌ಪುರ ಗುಜರಾತ್ ಅಲ್ಲ, ಅಲ್ಲಿ ಮುಸ್ಲಿಮರ ಸಂಖ್ಯೆ ಕೇವಲ ನಾಲ್ಕು ಪ್ರತಿಶತ ಎಂದು ಹೇಳಲಾಗಿದೆ. ''ಸಹಾರನ್‌ಪುರ ಗುಜರಾತ್ ಅಲ್ಲ... ಶೇಕಡ 42ರಷ್ಟು ಮುಸ್ಲಿಮರು ಇಲ್ಲಿ ವಾಸಿಸುತ್ತಿದ್ದಾರೆ... ಮೋದಿ ಇಲ್ಲಿಗೆ ಬಂದರೆ ತುಂಡು ತುಂಡಾಗುತ್ತಾರೆ,'' ಎಂದು ದೇವಬಂದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಮಸೂದ್ ಈ ಹೇಳಿಕೆ ನೀಡಿದ್ದರು. ಈವೇಳೆ ಇಬ್ಬರು ಬಿಎಸ್‌ಪಿ ಶಾಸಕರ ವಿರುದ್ಧವೂ ಮಸೂದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಘಟನೆ ಬಳಿಕ ಮಸೂದ್ ವಿರುದ್ಧ 2014ರ ಮಾರ್ಚ್ 27ರಂದು ದೇವಬಂದ್ ಪೊಲೀಸ್ ಠಾಣೆಯಲ್ಲಿ ಅಂದಿನ ಠಾಣೆ ಐ-ಚಾರ್ಜ್ ಕುಸುಮ್‌ವೀರ್ ಸಿಂಗ್ ಪ್ರಕರಣ ದಾಖಲಿಸಿದ್ದರು. ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಶಾಂತಿ ಭಂಗ ಮತ್ತು ಜಾತಿವಾದಿ ಹೇಳಿಕೆಗಳ ಆರೋಪ ಹಿನ್ನೆಲೆ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.

ಮೋದಿ 10 ವರ್ಷದ ಅವಧಿಯಲ್ಲಿ ತೆರಿಗೆ ಸಂಗ್ರಹ ಶೇ.182 ಏರಿಕೆ

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಸಾಕ್ಷಿಗಳ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಮಸೂದ್ ಅವರು 2023 ರಲ್ಲಿ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದರು. ಹಳೆಯ ಪಕ್ಷವು ಸಹರಾನ್‌ಪುರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದ್ದರು. ಅವರು ಬಿಜೆಪಿ ಅಭ್ಯರ್ಥಿ ರಾಘವ್ ಲಖನ್‌ಪಾಲ್ ಅವರನ್ನು 64 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು. 

click me!