Latest Videos

ಕೆಮಿಕಲ್ ಫ್ಯಾಕ್ಟರಿ ಸ್ಫೋಟದಲ್ಲಿ ಸಾವಿನಕ್ಕೆ 7ಕ್ಕೆ ಏರಿಕೆ, 50ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

By Chethan KumarFirst Published May 23, 2024, 8:16 PM IST
Highlights

ಡೊಂಬಿವಿಲಿಯಲ್ಲಿನ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 
 

ಮುಂಬೈ(ಮೇ.23) ರಾಸಾಯನಿ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 7 ಮಂದಿ ಮೃತಪಟ್ಟಿದ್ದೂ 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಈ ಫ್ಯಾಕ್ಟರಿಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಈ ವೇಳೆ ಕೆಲಸದಲ್ಲಿದ್ದ ಕಾರ್ಮಿಕರು ಸ್ಫೋಟದಲ್ಲಿ ಸುಟ್ಟು ಕರಕಲಾಗಿದ್ದಾರೆ. ಇತ್ತ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ.

ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರ್ಮಿಕರು ಫ್ಯಾಕ್ಟರಿಯಿಂದ ಹೊರಬರುವ ಮುನ್ನವೇ ಬಾಯ್ಲರ್ ಸ್ಫೋಟಗೊಂಡಿದೆ. ಮಧ್ಯಾಹ್ನ 1.15ಕ್ಕೆ ಸ್ಫೋಟ ಸಂಭವಿಸಿದೆ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಸಂಜೆ 6 ಗಂಟೆ ಹೊತ್ತಿಗೆ ಬೆಂಕಿ ಸಂಪೂರ್ಣ ನಂದಿಸಲಾಗಿದೆ. ಎನ್‌ಡಿಆರ್‌ಎಫ್ ಹಾಗೂ ಟಿಡಿಆರ್‌ಎಫ್ ದಳ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿತ್ತು.

ರಾಯಲ್ ಎನ್‌ಫೀಲ್ಡ್ ಬೈಕ್ ಸ್ಫೋಟಗೊಂಡು ಹಲವರಿಗೆ ಗಂಭೀರ ಗಾಯ, ಭಯಾನಕ ವಿಡಿಯೋ!

4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇತ್ತ ಗಾಯಗೊಂಡವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಇತ್ತ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸುರಕ್ಷತೆ ಕುರಿತು ನಿರ್ಲಕ್ಷ್ಯವಹಿಸಿದ್ದ ಫ್ಯಾಕ್ಟರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಸಂಬಂಧ 8 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. 

8 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ. ಸಂಪೂರ್ಣ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ಕಟ್ಟಡಗಳು ಕಂಪಿಸಿದೆ. ಇನ್ನು ಸ್ಥಳೀಯರ ಪ್ರಕಾರ, ತೀವ್ರವಾದ ಶಬ್ದ ಕೇಳಿಸಿದೆ. ಕಟ್ಟಡಗಳು ಕಂಪಿಸಿದೆ ಎಂದಿದ್ದಾರೆ.

 

STORY | Five dead, 56 injured as blast rips through chemical factory in Thane district

READ: https://t.co/pwCSsQXdwq

VIDEO: pic.twitter.com/n7X1WkQBkJ

— Press Trust of India (@PTI_News)

 

ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಫ್ಯಾಕ್ಟರಿಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬ್ಥರ ಜೊತೆ ಸರ್ಕಾರ ನಿಲ್ಲಲಿದೆ.ಭಾರವಾದ ನೋವಿನಿಂದ ಸಂತಾಪ ಸೂಚಿಸುತ್ತಿದ್ದೇನೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥ ಮಾಡಲಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಎಲ್ಲಾ ಸೂಚನೆ ನೀಡಲಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಫಡ್ನವಿಸ್ ಹೇಳಿದ್ದಾರೆ.

ಘಟನೆ ಕುರಿತು ಹಲವು ವಿಡಿಯೋಗಳು ಸ್ಫೋಟದ ತೀವ್ರತೆಯನ್ನು ಹೇಳುತ್ತಿದೆ. ಸದ್ಯ ಬೆಂಕಿಯ ಕೆನ್ನಾಲಿಗೆಯನ್ನು ನಿಯಂತ್ರಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ತನಿಖಾ ವರದಿ ಮೇಲೆ ಕಣ್ಣಟ್ಟಿದೆ.

ಶಿವಕಾಶಿಯಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ, 8 ಕಾರ್ಮಿಕರ ದೇಹ ಛಿದ್ರ ಛಿದ್ರ, 8 ಮಂದಿ ಗಂಭೀರ!
 

| Thane, Maharashtra: On the Dombivali boiler blast incident, Namdev Choudhary, Chief fire officer says, "The explosion occurred around 1.15 pm. We have recovered 4 bodies so far. The fire is under control and is being extinguished..." https://t.co/aTBW13pY3F pic.twitter.com/ZKc02YuTUR

— ANI (@ANI)
click me!