
ಚೆನ್ನೈ(ಏ.21): ಜೀವನದುದ್ದಕ್ಕೂ ಬಡರೋಗಿಗಳ ಪರವಾಗಿ ಸೇವೆ ಸಲ್ಲಿಸಿದ್ದ ವೈದ್ಯರೊಬ್ಬರು, ಕೊರೋನಾ ಸೋಂಕಿಗೆ ಬಲಿಯಾಗಿ ಕಲ್ಲು ತೂರಾಟದ ನಡುವೆಯೇ ಅಂತ್ಯಸಂಸ್ಕಾರಕ್ಕೆ ಒಳಗಾಗಬೇಕಾಗಿ ಬಂದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆಯ ವೈದ್ಯ ಸೈಮನ್ (55), ಸೋಮವಾರ ಸೋಂಕಿಗೆ ಬಲಿಯಾಗಿದ್ದರು. ಈ ವೇಳೆ ಕುಟುಂಬ ಸದಸ್ಯರಾರೂ ಜೊತೆಯಲ್ಲಿ ಇರದ ಕಾರಣ, ಅವರ ಇಬ್ಬರು ಸಹದ್ಯೋಗಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳೇ ಶವವನ್ನು ಕೊಯಮತ್ತೂರಿನ ಅಣ್ಣಾನಗರ್ ವೆಲ್ಲಯಂಗಾಡ್‌ನಲ್ಲಿ ಅಂತ್ಯಸಂಸ್ಕಾರಕ್ಕಾಗಿ ಕೊಂಡೊಯ್ಯಲಾಗಿತ್ತು.
ಗರ್ಭಿಣಿ ಮಗಳನ್ನು ನೋಡಲು ಈಜಿ ಬಂದ ತಂದೆ ನೀರುಪಾಲು..!
ಈ ವೇಳೆ ಸುತ್ತಮುತ್ತಲ ಪ್ರದೇಶ 300ಕ್ಕೂ ಹೆಚ್ಚು ಮಂದಿ ಕೊರೋನಾ ಪೀಡಿತರ ಅಂತ್ಯಸಂಸ್ಕಾರ ಮಾಡಬಾರದು ಎಂದು ಘೋಷಣೆ ಕೂಗಿ ಆ್ಯಂಬುಲೆನ್ಸ್ ಮತ್ತು ವೈದ್ಯರ ಮೇಲೆ ಕಲ್ಲು ಎಸೆದು, ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ. ಕೊನೆಗೆ ಪೊಲೀಸ್ ಬಂದೋಬಸ್‌್ತನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ