
ಸುಕ್ಮಾ/ ಬಿಜಾಪುರ: ನಕ್ಸಲ್ ನಿಗ್ರಹಕ್ಕೆ ಪಣ ತೊಟ್ಟಿರುವ ಛತ್ತೀಸ್‌ಗಢದಲ್ಲಿ 2026ರ ಆರಂಭದಲ್ಲೇ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯು 14 ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಹಾಗೂ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಲಿಸ್ಟ್‌ನಲ್ಲಿದ್ದ ಮಂಗ್ಟು (ಡಿವಿಸಿಎಂ) ಮತ್ತು ಹಂಗಾ ಮಡ್ಕಮ್ ಗುಂಪಿಗೆ ಸೇರಿದ ಒಟ್ಟು 14 ನಕ್ಸಲರು ಬಲಿಯಾಗಿದ್ದಾರೆ.
ಈ ವೇಳೆ ಬಿಜಾಪುರದಲ್ಲಿ ಎಸ್‌ಎಲ್‌ಆರ್ ರೈಫಲ್, 12 ಬೋರ್ ರೈಫಲ್‌ನನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷ ಛತ್ತೀಸ್‌ಗಢದಲ್ಲಿ 285 ನಕ್ಸಲರು ಹತ್ಯೆ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ