Chhattisgarh: ಭದ್ರತಾ ಸಿಬ್ಬಂದಿಯೊಂದಿಗೆ ನಕ್ಸಲರ ಗುಂಡಿನ ಕಾಳಗ: ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲ್‌ ಬಲಿ

Published : Jun 12, 2023, 03:05 PM IST
Chhattisgarh: ಭದ್ರತಾ ಸಿಬ್ಬಂದಿಯೊಂದಿಗೆ ನಕ್ಸಲರ ಗುಂಡಿನ ಕಾಳಗ: ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲ್‌ ಬಲಿ

ಸಾರಾಂಶ

ಛತ್ತೀಸ್‌ಗಢದ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿನಗುಂದ ಗ್ರಾಮದ ಬಳಿಯ ಅರಣ್ಯದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿ ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ.

ಕಂಕೇರ್‌ (ಜೂನ್ 12, 2023): ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಸೋಮವಾರ , ಜೂನ್ 12 ರಂದು ಗುಂಡಿನ ಕಾಳಗ ನಡೆದಿದೆ. ಈ ವೇಳೆ ಮಹಿಳಾ ನಕ್ಸಲೈಟ್‌ ಒಬ್ಬರು ಬಲಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಆಧರಿಸಿ ಮಾಹಿತಿ ತಿಳಿದುಬಂದಿದೆ.

ಛತ್ತೀಸ್‌ಗಢದ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿನಗುಂದ ಗ್ರಾಮದ ಬಳಿಯ ಅರಣ್ಯದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿ ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಇನ್ಸ್‌ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ತಿಳಿಸಿದ್ದಾರೆ.

ಇದನ್ನು ಓದಿ: ಛತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟದಲ್ಲಿ 10 ಜವಾನರು ಹುತಾತ್ಮ; ಚಾಲಕನೂ ಬಲಿ

ರಾಜ್‌ನಂದಗಾಂವ್-ಕಂಕೇರ್ ಗಡಿ ವಿಭಾಗಕ್ಕೆ (ಆರ್‌ಕೆಬಿ) ಸೇರಿದ ನಕ್ಸಲೀಯ ನಾಯಕರು ಮತ್ತು 20 ರಿಂದ 25 ಶಸ್ತ್ರಸಜ್ಜಿತ ಕಾರ್ಯಕರ್ತರ ಉಪಸ್ಥಿತಿಯ ಕುರಿತು ಮಾಹಿತಿಯ ಆಧಾರದ ಮೇಲೆ ಭಾನುವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) 132 ನೇ ಬೆಟಾಲಿಯನ್‌ನ ಸಿಬ್ಬಂದಿ ಈ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಐಜಿ ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ, 'ಸಮವಸ್ತ್ರ' ಧರಿಸಿದ್ದ ಅಪರಿಚಿತ ಮಹಿಳಾ ನಕ್ಸಲೈಟರೊಬ್ಬರ ಮೃತದೇಹವು (ಪಾಯಿಂಟ್‌) .303 ರೈಫಲ್‌ನೊಂದಿಗೆ ಪತ್ತೆಯಾಗಿದೆ ಎಂದೂ ಇನ್ಸ್‌ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ಹೇಳಿದ್ದಾರೆ. ಇನ್ನು, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದೂ ವರದಿಯಾಗಿದೆ. 

ಇದನ್ನೂ ಓದಿ: ನಗರ ನಕ್ಸಲರಿಂದ ಯೋಜನೆಗಳಿಗೆ ತಡೆ: Narendra Modi ಕಿಡಿ

ನಕ್ಸಲರ ದಾಳಿಗೆ 10 ಜವಾನರು, ಚಾಲಕ ಸೇರಿ 11 ಮಂದಿ ಹುತಾತ್ಮ
ಇನ್ನೊಂದೆಡೆ, ಛತ್ತೀಸ್‌ಗಢದಲ್ಲಿ ಏಪ್ರಿಲ್‌ 26ರಂದು ನಕ್ಸಲರು ಅಟ್ಟಹಾಸ ಮೆರೆದಿದ್ದು, ಅ ವೇಳೆ 10 ಜವಾನರು ಹುತಾತ್ಮರಾಗಿದ್ದರು. ಅಲ್ಲದೆ ಈ ಘಟನೆಯಲ್ಲಿ ಒಬ್ಬರು ಚಾಲಕರೂ ಬಲಿಯಾಗಿದ್ದಾರೆ. ದಾಂತೆವಾಡಾ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ನಡೆಸಿ ನಕ್ಸಲರು 10 ಜನ ಮೀಸಲು ಪೊಲೀಸ್‌ ಪಡೆಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿದ್ದವು. 

ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಿ ವಾಪಸ್‌ ಹೋಗುತ್ತಿದ್ದಾಗ ಈ ಬರ್ಬರ ಕೃತ್ಯ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.. 10 ಜನ ಜವಾನರು ಹಾಗೂ ಚಾಲಕ ಸೇರಿ 11 ಜನ ವಾಹನದಲ್ಲಿ ಹೋಗುತ್ತಿದ್ದಾಗ ಸಂಪೂರ್ಣ ವಾಹನವನ್ನೇ ಸ್ಪೋಟಿಸಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್‌ಗಢದ ದಾಂತೆವಾಡಾ ಜಿಲ್ಲೆಯ ಅರಣ್‌ಪುರ ಬಳಿ ಗುರುವಾರ ಈ ಘಟನೆ ನಡೆದಿದ್ದು, ಗುಪ್ತಚರ ಮಾಹಿತಿ ಆಧಾರದ ಮೇಲೆ ಇವರು ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದರು.

ಇದನ್ನೂ ಓದಿ: Naxal Encounter: ಛತ್ತೀಸ್‌ಗಢ ತೆಲಂಗಾಣ ಗಡಿಯಲ್ಲಿ ಗುಂಡಿನ ಚಕಮಕಿ : 6 ನಕ್ಸಲರ ಹತ್ಯೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಅಳಿಸದ ಇಂಕ್‌ ಅಳಿಸಿದ ವಿವಾದ
ದರ ನಿಗದಿ ಪ್ರಕ್ರಿಯೆ ಸೀಕ್ರೆಟ್‌ ಬಹಿರಂಗಪಡಿಸಲ್ಲ: ರೈಲ್ವೆ