ಜನವಸತಿ ಪ್ರದೇಶದಲ್ಲಿ ಗುಂಡು ಹಾರಿಸಿ ಹುಚ್ಚಾಟ, ಚಿಕ್ಕಮಗಳೂರು ಬಿಜೆಪಿ ನಾಯಕನ ವಿರುದ್ಧ ಗಂಭೀರ ಆರೋಪ

Published : Oct 22, 2026, 11:36 PM IST
Chikkamagaluru BJP Leader Jeevan Kote

ಸಾರಾಂಶ

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ಕೋಟೆ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾರೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಜನವಸತಿ ಪ್ರದೇಶದಲ್ಲಿ 5 ಸುತ್ತು ಫೈರಿಂಗ್ ಮಾಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷನ ಹುಚ್ಚಾಟದ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ಜನವಸತಿ ಪ್ರದೇಶದಲ್ಲೇ ಸಾರ್ವಜನಿಕರ ಜೀವಕ್ಕೆ ಕ್ಯಾರೇ ಎನ್ನದೆ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ.

5 ಸುತ್ತು ಗುಂಡು ಹಾರಾಟ

ಜೀವನ್ ಕೋಟೆ, ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕ. ಈತ ಚಿಕ್ಕಮಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜೀವನ್ ಕೋಟೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಬೆಚ್ಚಿಬಿದ್ದಿರುವ ಜನ

ಜನ ವಸತಿ ಪ್ರದೇಶದಲ್ಲಿ 5 ಸುತ್ತು ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಡಬಲ್ ಬ್ಯಾರಲ್ ಗನ್ ಅದಾಗಿದ್ದು, ಆಯುಧ ಪೂಜೆ ಹಿನ್ನೆಲೆ ಮನೆಯ ಮುಂಭಾಗದಲ್ಲಿ ಹುಚ್ಚಾಟ ಮರೆದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗುಂಡು ಹಾರಿಸಿದ ಅಕ್ಕಪಕ್ಕದಲ್ಲಿ ಮನೆಗಳಿವೆ. ಜನರು ಓಡಾಡುವ ಜಾಗದಲ್ಲೇ ಫೈರಿಂಗ್ ಮಾಡಲಾಗಿದೆ. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಈ ರೀತಿ ಜನರನ್ನು ಭಯ ಬೀಳಿಸೋದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

ಇನ್ನು, ಜೀವನ್ ಕೋಟೆ ರಾಜಾರೋಷವಾಗಿ ಬಂದೂಕುಗಳಿಂದ ಗುಂಡು ಹಾರಿಸುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರ ಕಾರ್ಯವೈಖರಿ ಮೇಲೂ ಸಾರ್ವಜನಿಕರು ಕಣ್ಣಿಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

‘ನನ್ನ ಕೈಗಳನ್ನು ಕಟ್ಟಿಹಾಕಿರದಿದ್ದರೆ..' 2011ರಲ್ಲಿ ಮೋದಿ ಆಡಿದ್ದ ಮಾತು ನೆನಪಿಸಿ ಕೇಂದ್ರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ
ಗಾಯಕ ಸಿಧು ಮೂಸೆವಾಲಾ 2 ವರ್ಷದ ತಮ್ಮನ ಮೇಲೆ ಕೇಸ್​ ದಾಖಲು! ಬಂದೂಕು ಸನ್ನೆ ವಿರುದ್ಧ ಆಕ್ರೋಶ