ಮಕ್ಕಳ ಹೆಂಡ್ತಿ ಕಸ್ಟಡಿಗೆ ಕೊಡ್ಬೇಕಾಗುತ್ತೆ ಅಂತ ಇಬ್ಬರು ಮುದ್ದು ಮಕ್ಕಳ ಕೊಂದು ಸಾವಿಗೆ ಶರಣಾದ ಪತಿ, ಆತನ ತಾಯಿ

Published : Dec 23, 2025, 07:15 PM IST
Husband, Mother Kill 2 Children1

ಸಾರಾಂಶ

ವಿಚ್ಛೇದನದ ನಂತರ ಮಕ್ಕಳ ಕಸ್ಟಡಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯ ನಂತರ ಗಂಡ ಹಾಗೂ ಆತನ ತಾಯಿ ಇಬ್ಬರು ಮುದ್ದಾದ ಪುಟ್ಟ ಮಕ್ಕಳಿಗೆ ವಿಷವುಣಿಸಿ ಕೊಲೆ ಮಾಡಿ ಬಳಿಕ ತಾವೂ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ.

ವಿಚ್ಛೇದನದ ನಂತರ ಮಕ್ಕಳ ಕಸ್ಟಡಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯ ನಂತರ ಗಂಡ ಹಾಗೂ ಆತನ ತಾಯಿ ಇಬ್ಬರು ಮುದ್ದಾದ ಪುಟ್ಟ ಮಕ್ಕಳಿಗೆ ವಿಷವುಣಿಸಿ ಕೊಲೆ ಮಾಡಿ ಬಳಿಕ ತಾವೂ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಕೊಲೆಯಾದ ಪುಟ್ಟ ಮಕ್ಕಳನ್ನು ಆರು ವರ್ಷದ ಹಿಮಾ 2 ವರ್ಷದ ಕಣ್ಣನ್ ಎಂದು ಗುರುತಿಸಲಾಗಿದೆ. ಹಾಗೆಯೇ ಘಟನೆಯ ಬಳಿಕ ಸಾವಿಗೆ ಶರಣಾದ ಮಕ್ಕಳ ಅಜ್ಜಿಯನ್ನು 56 ವರ್ಷದ ಉಷಾ ಹಾಗೂ ಮಕ್ಕಳ ತಂದೆಯನ್ನು 36 ವರ್ಷದ ಕಲಾಧರನ್ ಎಂದು ಗುರುತಿಸಲಾಗಿದೆ.

ಮಕ್ಕಳನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವ ಕಸ್ಟಡಿ ಅವಧಿ ಮುಗಿಯಿತು ಇನ್ನು ಮಕ್ಕಳನ್ನು ಆಕೆಯ ತಾಯಿಯ ಸುಪರ್ದಿಗೆ ವಹಿಸಬೇಕು ಎಂದು ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳ ತಾಯಿ ತನ್ನ ವಿಚ್ಚೇದಿತ ಪತಿಯಲ್ಲಿ ಮಕ್ಕಳನ್ನು ಕಳುಹಿಸಿಕೊಡುವಂತೆ ಕೇಳಿದ ನಂತರ ಕೃತ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಕಣ್ಣೂರು ಜಿಲ್ಲೆಯ ಪಯ್ಯನೂರ್ ಗ್ರಾಮದ ರಾಮಂತಹಳ್ಳಿಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಸೋಮವಾರ ರಾತ್ರಿ ಇಬ್ಬರು ಮಕ್ಕಳು ಹಾಗೂ ಅಪ್ಪ ಅಜ್ಜಿ ಮನೆಯಲ್ಲೇ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ಹೇಳಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಈ ಅಮ್ಮ ಮಗ ಪುಟ್ಟ ಮಕ್ಕಳಿಗೆ ಹಾಲಿನಲ್ಲಿ ಕೀಟ ನಾಶಕ ಬೆರೆಸಿ ನೀಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳದಲ್ಲಿ ಹಾಲು ಇದ್ದ ಕೀಟನಾಶಕದ ಬಾಟಲ್ಪತ್ತೆಯಾಗಿದೆ. ಹಾಗೆಯೇ ಕೀಟನಾಶಕವನ್ನು ಕೂಡ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಪ್ಯಾಸೆಂಜರ್‌ಗೆ ಮೂಗಿನ ಮೂಳೆ ಮುರಿಯುವಂತೆ ಹೊಡೆದ ಏರ್ ಇಂಡಿಯಾ ಪೈಲಟ್ ವಿರುದ್ಧ ಎಫ್‌ಐಆರ್‌

ಮಕ್ಕಳಿಗೆ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ದೇಹದಲ್ಲಿ ವಿಷ ಸೇರಿರುವುದು ಪತ್ತೆಯಾಗಿದೆ. ಇದರ ಜೊತೆಗೆ ಕಲಾಧರನ್ ಹಾಗೂ ಉಷಾ ಕೂಡ ವಿಷ ಸೇವಿಸಿಯೇ ನೇಣಿಗೆ ಶರಣಾಗಿರುವುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಲಾಧರನ್ ಹಾಗೂ ಆತನ ಪತ್ನಿ ನಯನತಾರಾ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ನಯನತಾರಾ ತನ್ನ ಮಕ್ಕಳನ್ನು ಮತ್ತೆ ತನ್ನ ಸುಪರ್ದಿಗೆ ನೀಡುವಂತೆ ಪೊಲೀಸರನ್ನು ಸಂಪರ್ಕಿಸಿದಾಗ ನ್ಯಾಯಾಲಯವೂ ಮಕ್ಕಳನ್ನು ಆಕೆಯ ಸುಪರ್ದಿಗೆ ನೀಡುವಂತೆ ಕಲಾಧರನ್‌ಗೆ ಸೂಚಿಸಿತ್ತು. ಹೀಗಾಗಿ ಮಕ್ಕಳನ್ನು ಕಳುಹಿಸಲು ಅನುಕೂಲವಾಗುವಂತೆ ಪೊಲೀಸರು ಹಿಂದಿನ ರಾತ್ರಿ ಆತನನ್ನು ಸಂಪರ್ಕಿಸಿದ್ದರು. ಘಟನಾ ಸ್ಥಳದಲ್ಲಿ ಆತ್ಮಹತ್ಯಾ ಪತ್ರ ಲಭ್ಯವಾಗಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಭುಗಿಲೆದ್ದ ಕಾಂಬೋಡಿಯಾ ಥೈಲ್ಯಾಂಡ್ ನಡುವಿನ ಸಮರ: 11ನೇ ಶತಮಾನದ ಹಿಂದೂ ಶಿವ ದೇಗುಲ ಧ್ವಂಸ

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತನಗಿಂತ 20 ವರ್ಷ ಕಿರಿಯ ಕಾಂಗ್ರೆಸ್‌ ನಾಯಕಿಯ ವಿವಾಹವಾದ ಬಿಜೆಪಿಯ 63 ವರ್ಷದ ಮಾಜಿ ಮಂತ್ರಿ!
ಜನವರಿ 1ರಿಂದ ಬೆಂಗಳೂರು ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆ