ಗಡಿ ಬಳಿ ಚೀನಾ 90 ಹಳ್ಳಿ ನಿರ್ಮಾಣ: ಭಾರತದ ವಿರುದ್ಧ ಸಂಚು?

Published : Feb 21, 2025, 06:52 AM ISTUpdated : Feb 21, 2025, 07:10 AM IST
ಗಡಿ ಬಳಿ ಚೀನಾ 90 ಹಳ್ಳಿ ನಿರ್ಮಾಣ: ಭಾರತದ ವಿರುದ್ಧ ಸಂಚು?

ಸಾರಾಂಶ

ಚೀನಾವು ಅರುಣಾಚಲ ಪ್ರದೇಶದ ಗಡಿಯಾಚೆ 90 ಹಳ್ಳಿಗಳನ್ನು ನಿರ್ಮಿಸುತ್ತಿದ್ದು, ಇದು ಭಾರತದ ವಿರುದ್ಧ ಸೇನಾ ಮೂಲಸೌಕರ್ಯ ಬಲಪಡಿಸುವ ಹುನ್ನಾರವಿರಬಹುದು ಎಂದು ಶಂಕಿಸಲಾಗಿದೆ. ಟಿಬೆಟ್ ನಿರಾಶ್ರಿತರ ಪರಾರಿಗೆ ಕಡಿವಾಣ ಹಾಕಲು ನೇಪಾಳ ಗಡಿಯಲ್ಲೂ ಚೀನಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿದೆ.

ನವದೆಹಲಿ: ಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ, ಅರುಣಾಚಲ ಪ್ರದೇಶದ ಗಡಿಯಾಚೆಗಿನ ಭಾಗದಲ್ಲಿ 90 ಹಳ್ಳಿಗಳನ್ನು ನಿರ್ಮಿಸುತ್ತಿದೆ. ಇದನ್ನು ಅದು ಭಾರತದ ವಿರುದ್ಧ ಸೇನಾ ಮೂಲಸೌಕರ್ಯ ಬಲಪಡಿಸುವ ಉದ್ದೇಶಕ್ಕೆ ಬಳಸುವ ಶಂಕೆಯಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇನ್ನೊಂದು ಕಡೆ, ಚೀನಾದ ಕಮ್ಯುನಿಸ್ಟ್ ಆಡಳಿತದಿಂದ ತಪ್ಪಿಸಿಕೊಳ್ಳಲು ಟಿಬೆಟ್‌ ನಿರಾಶ್ರಿತರು ಸಾಮಾನ್ಯವಾಗಿ ಬಳಸುವ ಟಿಬೆಟ್‌ ಹಾಗೂ ನೇಪಾಳದ ನಡುವಿನ ಗಡಿಯಲ್ಲೂ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಮೂಲಕ ಅವರ ಪರಾರಿಗೆ ಕಡಿವಾಣ ಹಾಕುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.ಹೀಗಾಗಿ, 5 ವರ್ಷ ಹಿಂದಿನ ಗಲ್ವಾನ್‌ ಸಂಘರ್ಷದ ಬಳಿಕ ಗಡಿಯಲ್ಲಿ ಇತ್ತೀಚೆಗೆ ಶಾಂತಿ ಮಂತ್ರ ಜಪ ಆರಂಭಿಸಿದ್ದ ಚೀನಾ ಗುಪ್ತವಾಗಿ ಭಾರತದ ವಿರುದ್ಧ ಮತ್ತೆ ಕತ್ತಿ ಮಸೆಯುತ್ತಿದೆ ಎಂದು ಸಾಬೀತಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಖರ್ಗೆ ಆಕ್ರೋಶ:
ಈ ವರದಿ ಬಹಿರಂಗವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮೋದಿ ಅವರ ಆದ್ಯತೆಗಳು ನಕಲಿ ಜಾಹೀರಾತುಗಳ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವುದೇ ವಿನಃ ರಾಷ್ಟ್ರೀಯ ಭದ್ರತೆಯಲ್ಲ. ಚೀನಾಗೆ ಕೆಂಗಣ್ಣು ತೋರುವ ಬದಲು ಪ್ರಧಾನಿ ಮೋದಿ ಅವರಿಗೆ ಸಲಾಂ ಮಾಡುತ್ತಿದ್ದಾರೆ. ರಾಷ್ಟ್ರೀಯ ಭದ್ರತೆ, ಪ್ರಾದೇಶಿಕ ಸಾರ್ವಭೌಮತ್ವ ಮತ್ತು ಸಮಗ್ರತೆ ಅತಿಮುಖ್ಯವಾದವು. ಆದರೆ ಮೋದಿ ಅವುಗಳಿಗೇ ಅಪಾಯ ತಂದೊಡ್ಡುತ್ತಿದ್ದಾರೆ. ಇದಕ್ಕೆ ನಮ್ಮ ಬಳಿ ಸೂಕ್ತ ಸಾಕ್ಷಿಗಳಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಂತೆಯೇ, ‘ಗಡಿ ಪ್ರದೇಶದ ಹಳ್ಳಿಗಳ ಅಭಿವೃದ್ಧಿಗಾಗಿ ಆರಂಭಿಸಲಾದ ವೈಬ್ರಂಟ್ ವಿಲೇಜಸ್ ಕಾರ್ಯಕ್ರಮದ ಶೇ.90ರಷ್ಟು ನಿಧಿಯನ್ನು ಕಳೆದೆರಡು ವರ್ಷಗಳಲ್ಲಿ ಖರ್ಚೇ ಮಾಡಿಲ್ಲ. 4,800 ಕೋಟಿ ರು.ನಲ್ಲಿ ಕೇವಲ 509 ಕೋಟಿ ರು. ವ್ಯಯಿಸಲಾಗಿದೆ’ ಎಂದು ಖರ್ಗೆ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..