
ನವದೆಹಲಿ(ಡಿ.13): ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೂಲಕ ಸಂಸತ್ತಿನಲ್ಲಿ ಅನುಮೋದನೆಗೊಂಡಿದ್ದ ಪೌರತ್ವ ವಿಧೇಯಕ 2019 ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ.
ಕೇಂದ್ರ ಸರ್ಕಾರದ ಅಧಿಕೃತ ಗೆಜೆಟ್‌ನಲ್ಲಿ ಈ ಕುರಿತು ಅಧಿಸೂಚನೆ ಪ್ರಕಣೆಯಾಗಿದ್ದು, ಇಂದಿನಿಂದಲೇ ನೂತನ ಕಾಯ್ದೆ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ತ್ರಿವಳಿ ತಲಾಖ್, ಆರ್ಟಿಕಲ್ 370, ಪೌರತ್ವ ಮಸೂದೆ: ಮುಂದಿನ ಹೆಜ್ಜೆಗೆ ಕೇಂದ್ರದ ಭರದ ಸಿದ್ಧತೆ!
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನದಿಂದ ವಲಸೆ ಬಂದ ಹಿಂದೂ, ಕ್ರಿಶ್ಚಿಯನ್, ಬೌದ್ಧ ಹಾಗೂ ಜೋರಾಸ್ಟ್ರಿಯನ್ ಸಮುದಾಯದ ಜನರಿಗೆ ಭಾರತದ ಶಾಶ್ವತ ಪೌರತ್ವ ಕಲ್ಪಿಸಲು ಈ ಕಾನೂನು ಸಹಾಯಕಾರಿ.
ಆದರೆ ಕೇರಳ, ಪಂಜಾಬ್ ಹಾಗೂ ಪ.ಬಂಗಾಳ ರಾಜ್ಯ ಸರ್ಕಾರಗಳು ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿದ್ದು, ಆಯಾ ರಾಜ್ಯಗಳಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಿಸಿವೆ.
ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ