
ಕೋಲ್ಕತಾ(ಜೂ.13): ಕೋಲ್ಕತಾದ ಶವಾಗಾರವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತ ದೇಹಗಳನ್ನು ಅಮಾನವೀಯವಾಗಿ ಎಳೆದೊಯ್ದು ವ್ಯಾನ್‌ವೊಂದರಲ್ಲಿ ತುಂಬುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೊರೋನಾ ವೈರಸ್‌ನಿಂದ ಜನರು ಮೃತಪಟ್ಟಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.
ಮೃತ ದೇಹಗಳು ಕೊರೋನಾ ವೈರಸ್ ಪೀಡಿತ ರೋಗಿಗಳದ್ದಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ಮೃತ ಪಟ್ಟವರು ಕೊರೋನಾ ವೈರಸ್ ರೋಗಿಗಳಲ್ಲ. ಅವು ವಾರಸುದಾರರು ಇಲ್ಲದ ದೇಹಗಳು ಎಂದು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಕಳವಳ ವ್ಯಕ್ತಪಡಿಸಿದ್ದು, ಮೃತದೇಹಗಳನ್ನು ಹೃದಶೂನ್ಯವಾಗಿ ವಿಲೇವಾರಿ ಮಾಡಲಾಗಿದೆ. ಈ ಕೃತ್ಯ ಎಸಗಿದವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಗೃಹ ಕಾರ್ಯದರ್ಶಿಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ