
ನವದೆಹಲಿ (ಆ.27) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಮೂರ್ತಿ ಬಿಆರ್ ಗವಾಯಿ ಅವಧಿ ನವೆಂಬರ್ 23ಕ್ಕೆ ಅಂತ್ಯಗೊಳ್ಳುತ್ತಿದೆ. ನವೆಂಬರ್ 23ರಂದು ಚೀಫ್ ಜಸ್ಟೀಸ್ ಆಫ್ ಇಂಡಿಯಾ ಬಿಆರ್ ಗವಾಯಿ ನಿವೃತ್ತಿಯಾಗುತ್ತಿದ್ದಾರೆ. ನವೆಂಬರ್ 24ರಂದು ಹೊಸ ಸಿಜೆಐ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ನಿವೃತ್ತಿಯಾಗುತ್ತಿರುವ ಬಿಆರ್ ಗವಾಯಿ ಇದೀಗ ಮುಂದಿನ ಸಿಜೆಐ ಯಾರು ಅನ್ನೋದು ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಂದಿನ ಚೀಫ್ ಜಸ್ಟೀಸ್ ಸೂರ್ಯ ಕಾಂತ್ ಎಂದು ಹೆಸರು ಸೂಚಿಸಿದ್ದಾರೆ.
ನವೆಂಬರ್ 24ರಂದು ಜಸ್ಟೀಸ್ ಸೂರ್ಯ ಕಾಂತ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಸಲಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲನಾಗಿರುವ ಸೂರ್ಯ ಕಾಂತ್ ಹೆಸರನ್ನು ಗವಾಯಿ ಸೂಚಿಸಿದ್ದಾರೆ. ಸಿಜೆಐ ಬಿಆರ್ ಗವಾಯಿ ಶಿಫಾರಸ್ಸಿನ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದ್ದಾರೆ. ನವೆಂಬರ್ 24ರಂದು ಜಸ್ಟೀಸ್ ಸೂರ್ಯ ಕಾಂತ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
1962ರಲ್ಲಿ ಜನಿಸಿದ ಸೂರ್ಯ ಕಾಂತ್ ಹರ್ಯಾಣ ಕೋರ್ಟ್‌ನಲ್ಲಿ ಹಿರಿಯ ವಕೀಸಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಂಚಿಯ ನ್ಯಾಷನಲ್ ಯೂನಿವರ್ಸಿಟಿ ಆಫರ್ ಸ್ಟಡಿ ಆ್ಯಂಡ್ ರೀಸರ್ಚ್ ಇನ್ ಲಾ ಕಾಲೇಜಿನಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹಿರಿತನದ ಆಧಾರದ ಮೇಲೆ ಸೂರ್ಯ ಕಾಂತ್ ಅವರು ಮುಂದಿನ ಮಖ್ಯ ನ್ಯಾಯಮೂರ್ತಿಯಾಗಿ ಶಿಫಾರಸ್ಸುಗೊಂಡಿದ್ದಾರೆ. ಹರ್ಯಾಣ ಮೂಲದ ಸೂರ್ಯ ಕಾಂತ್, ಹಿಸ್ಸಾರದ ಸರ್ಕಾರಿ ಕಾಲೇಜಿನಲ್ಲಿ ಪದವಿ, ರೊಹ್ಟಕ್‌ನ ಮಹರ್ಷಿ ದಯಾನಂದ್ ವಿಶ್ವವಿದ್ಯಾಲದಲ್ಲಿ ಬ್ಯಾಚುಲರ್ ಆಫ್ ಲಾ, ಕುರುಕ್ಷೇತ್ರ ವಿಶ್ವವಿದ್ಯಾಲದಯಲ್ಲಿ ಮಾಸ್ಟರ್ ಆಫ್ ಲಾ ಪದವಿ ಪಡೆದಿದ್ದಾರೆ.
ಸೂರ್ಯ ಕಾಂತ್ ಹಲವು ಐತಿಹಾಸಿಕ ತೀರ್ಪು ನೀಡಿದ್ದಾರೆ. ಮಾನವ ಹಕ್ಕುಗಳು, ಲಿಂಗ ಸಮಾನತೆ, ಶಿಕ್ಷಣ, ಜೈಲು ಖೈದಿಗಳ ನೀತಿಗಳಲ್ಲಿ ಸುಧಾರಣೆ ಸೇರಿದಂತೆ ಹಲವು ಐತಿಹಾಸಿಕ ತೀರ್ಪು ನೀಡಿ ಗಮನಸೆಳೆದಿದ್ದಾರೆ. ಇತ್ತೀಚೆಗ ಭಾರಿ ವಿವಾದಕ್ಕೆ ಕಾರಣವಾಗಿದ್ದ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಪ್ರಕರಣದಲ್ಲಿ ಸೂರ್ಯ ಕಾಂತ್ ವಿಚಾರಣೆ ನೆಡೆಸಿದ್ದಾರೆ. ಇದೇ ಪ್ರಕರಣದಲ್ಲಿ ಯೂಟ್ಯೂಹರ್ ರಣವೀರ್ ಅಲಹಾಬಾದಿಯಾ ಬಂಧನ ಕೋಲಾಹಲ ಸೃಷ್ಟಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ