
ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ ತಾಯಿ ಮತ್ತು ಕುಟುಂಬದಲ್ಲಿ ತೀವ್ರ ಶೋಕ ಆವರಿಸಿದೆ. ದೆಹಲಿಯಲ್ಲಿ ಪಕ್ಷದ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಈ ದುರದೃಷ್ಟಕರ ಘಟನೆ ಸಂಭವಿಸಿದೆ. ಈ ವೇಳೆ ಅವರ ಅಜ್ಜಿ ಬೆಳಗ್ಗೆ ನಿಧನರಾಗಿದ್ದಾರೆ.
ಸಾವಿತ್ರಿಬಾಯಿ ಶಂಕರ್ ದೀಪ್ಕೆ (ಸುಮಾರು 80-85 ವರ್ಷ) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್ ಪಿಂಪ್ರಿ ಗ್ರಾಮದಲ್ಲಿ ಜೀವಿಸಿದ ಅವರು ದೀರ್ಘಕಾಲದ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆಯು ಭಾನುವಾರ ಬೆಳಿಗ್ಗೆ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.
ಇದೀಗ ದೆಹಲಿ ಪ್ರತಿಭಟನೆಯಲ್ಲಿ ದಿಪ್ಕೆ ಬಂಧನವಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ CJP ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಆಗಮಿಸಿದ ಅಭಿಜೀತ್ ದೀಪ್ಕೆ ಅವರನ್ನು ವಿಮಾನ ನಿಲ್ದಾಣದಲ್ಲಿಯೇ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಭಿಜೀತ್ ಈಗ ಪೊಲೀಸ್ ವಶದಲ್ಲಿದ್ದಾಗಲೇ ಅಜ್ಜಿಯ ಸಾವಿನ ದುಃಖದ ಸುದ್ದಿ ಬಂದಿದೆ.
ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಜೆಪಿ ಈ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈಗಾಗಲೇ ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದು, ದೆಹಲಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಭಿಜೀತ್ ದೀಪ್ಕೆ ಅನುಪಸ್ಥಿತಿಯಲ್ಲಿ ಪಕ್ಷದ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂದೆ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ.
ಈಗಾಗಲೇ ಅಶುತೋಷ, ದಿಪ್ಕೆ, ದ್ರವ್ ರಾಠಿ ಸೇರಿ ಹಲವರ ಬಂಧನವಾಗಿದೆ. ಈ ನಿಟ್ಟಿನಲ್ಲಿ ಈಗಾಗಗಲೇ ಬಂಧನವಾದರೆ, ಕಾರ್ಯಕರ್ತರಿಗೆ ಕುಳಿತಲ್ಲೇ ಪ್ರತಿಭಟನೆಗೆ ಮುಂದಾಗಿ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಇನ್ನು ಬಿಗುವಿನ ವಾತಾವರಣವೇ ನಿರ್ಮಾಣವಾಗಿದೆ. ಆದ್ದರಿಂದ ಮುಂದೆನು ಆಗುತ್ತದೆಯೋ ಎನ್ನುವುದನ್ನು ಕಾಯ್ದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ