ಜಮ್ಮು ಕಿಶ್ತ್ವಾರ್‌ ಜಿಲ್ಲೆಯಲ್ಲಿ ಮೇಘಸ್ಫೋಟಕ್ಕೆ 46 ಜನ ಬಲಿ

Kannadaprabha News   | Kannada Prabha
Published : Aug 15, 2025, 04:41 AM IST
jammu and kashmir

ಸಾರಾಂಶ

ಇಲ್ಲಿನ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಭಾರೀ ಮೇಘಸ್ಫೋಟ ಸಂಭವಿಸಿದೆ. ಇಬ್ಬರು ಸಿಐಎಸ್‌ಎಫ್‌ ಸಿಬ್ಬಂದಿ ಸೇರಿ 46 ಮಂದಿ ಬಲಿಯಾಗಿದ್ದು, 120 ಮಂದಿಯನ್ನು ರಕ್ಷಿಸಲಾಗಿದೆ. 38 ಜನರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

ಜಮ್ಮು : ಇಲ್ಲಿನ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಭಾರೀ ಮೇಘಸ್ಫೋಟ ಸಂಭವಿಸಿದೆ. ಇಬ್ಬರು ಸಿಐಎಸ್‌ಎಫ್‌ ಸಿಬ್ಬಂದಿ ಸೇರಿ 46 ಮಂದಿ ಬಲಿಯಾಗಿದ್ದು, 120 ಮಂದಿಯನ್ನು ರಕ್ಷಿಸಲಾಗಿದೆ. 38 ಜನರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ, ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ, ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಆಘಾತ ವ್ಯಕ್ತಪಡಿಸಿದ್ದಾರೆ. ಮೇಘಸ್ಫೋಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಒಮರ್‌ ಮಾಹಿತಿ ನೀಡಿದ್ದಾರೆ. ಕೇಂದ್ರದಿಂದ ಸಕಲ ರಕ್ಷಣಾ ನೆರವು ನೀಡುವ ಬಗ್ಗೆ ಮೋದಿ ಹಾಗೂ ಶಾ ಭರವಸೆ ನೀಡಿದ್ದಾರೆ.ಆಗಿದ್ದೇನು?:

ಮಚೈಲ್‌ ಮಾತಾ ಜಾತ್ರೆಗಾಗಿ ಚಶೋತಿ ಎಂಬಲ್ಲಿ ಜನ ನೆರೆದಿದ್ದ ವೇಳೆ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ಮೇಘಸ್ಫೋಟ ಸಂಭವಿಸಿ ಭಾರೀ ಮಳೆಯಾಗಿದೆ. ಆಗ ಹಠಾತ್‌ ಪ್ರವಾಹ ಉಂಟಾಗಿ ಜನರು ಹಾಗೂ ಭದ್ರತೆಗಿದ್ದ ಸಿಐಎಸ್ಎಫ್‌ ಸಿಬ್ಬಂದಿ ಸೇರಿ ಅನೇಕರು ಕೊಚ್ಚಿಕೊಂಡು ಹೋಗಿದ್ದಾರೆ.

ಘಟನೆಯಿಂದ ಅಪಾರ ನಷ್ಟವಾಗಿದ್ದು, ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಪೊಲೀಸ್‌, ಸೇನೆ, ಸ್ಥಳೀಯರಿಂದ ರಕ್ಷಣಾ ಕಾರ್ಯ ಮುಂದುವರಿಸಿವೆ. ಅತ್ತ ಯಾತ್ರೆಗೆ ಕಡಿವಾಣ ಹಾಕಲಾಗಿದೆ. ನಿರಂತರ ಮಳೆಯು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಮಾಡಿದೆ.

ಒಂದು ಗಂಟೆಯಲ್ಲಿ 10 ಸೆಂ.ಮೀ. ಮಳೆ ಸುರಿದರೆ ಮೇಘಸ್ಫೋಟ ಎನ್ನುತ್ತಾರೆ.

ಸಿಎಂ, ಶಾ ಆಘಾತ:

‘ಘಟನೆ ಸಂಭವಿಸಿದ ಪ್ರದೇಶಗಳಿಂದ ಆ ಕುರಿತ ಮಾಹಿತಿಗಳು ಒಂದೊಂದಾಗಿ ಲಭಿಸುತ್ತಿವೆ. ಸುದ್ದಿ ಕಠೋರವಾದರೂ ನಿಖರವಾಗಿದೆ’ ಎಂದು ಸಿಎಂ ಒಮರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಜತೆಗೆ, ಸ್ವಾತಂತ್ರ್ಯ ದಿನದ ಮುನ್ನಾ ದಿನದ ಚಹಾಕೂಟ ರದ್ದು ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಮಿತ್‌ ಶಾ, ‘ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಿಎಂ ಅವರಿಂದ ಮೇಘಸ್ಫೋಟಕ್ಕೆ ಸಂಬಂಧಿಸಿ ಮಾಹಿತಿ ಪಡೆದೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..