
ಜಮ್ಮು/ಶಿಮ್ಲಾ(ಜು.29): ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಬುಧವಾರ ಮೇಘಸ್ಫೋಟವಾಗಿದ್ದು, 17 ಜನರು ಬಲಿಯಾಗಿದ್ದಾರೆ. ಕಾಶ್ಮೀರದಲ್ಲಿ 8 ಹಾಗೂ ಹಿಮಾಚಲದಲ್ಲಿ 9 ಜನ ಅಸುನೀಗಿದ್ದಾರೆ. ಪವಿತ್ರ ಅಮರನಾಥ ಗುಹೆ ಸನಿಹವೂ ಮೇಘಸ್ಫೋಟ ಸಂಭವಿಸಿದ್ದು, ಯಾತ್ರೆಯ ಸಮಯ ಇದಾಗಿರದ ಕಾರಣ ಯಾವುದೇ ಸಾವು-ನೋವು ವರದಿ ಆಗಿಲ್ಲ.
ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ಕಲ್ಲು-ಬಂಡೆ ಉರುಳಿ 9 ಪ್ರವಾಸಿಗರು ಸಾವು!
ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧ್ಯವಿರುವ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ. ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ.
"
ಕಾಶ್ಮೀರದಲ್ಲಿ:
ಕಿಶ್‌್ತವಾರ್ ಜಿಲ್ಲೆಯ ಕುಗ್ರಾಮ ಹೊನ್ಜಾರ್ ಎಂಬಲ್ಲಿ ಬುಧವಾರ ಬೆಳಗಿನ ಜಾವ 4.30ರ ವೇಳೆಗೆ ಎರಡು ಮೇಘಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದರು, 17 ಜನರು ಗಾಯಗೊಂಡಿದ್ದಾರೆ. ಈ ಪೈಕಿ 5 ಜನರ ಸ್ಥಿತಿ ಗಂಭೀರವಾಗಿದೆ. ಇನ್ನೊಂದೆಡೆ ನಾಪತ್ತೆಯಾದ 14 ಜನರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಆದರೆ ಪ್ರತಿಕೂಲ ಪರಿಣಾಮದಿಂದಾಗಿ ಹೆಚ್ಚಿನ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತೆರಳುವುದಕ್ಕೆ ಅಡ್ಡಿಯಾಗಿದೆ. ಘಟನೆಯಲ್ಲಿ 6 ಮನೆ, ಒಂದು ಪಡಿತರ ಅಂಗಡಿ ಮತ್ತು ಒಂದು ಸೇತುವೆಗೆ ಹಾನಿಯಾಗಿದೆ. ಅಲ್ಲದೆ ಕಣಿವೆ ಪ್ರದೇಶಗಳಲ್ಲಿ ಪ್ರವಾಹ ಕಾಣಿಸಿಕೊಂಡಿದೆ.
ವ್ಯಾಪಾರ ಪ್ರಗತಿಗೆ ಹೊಸ ವಿಧಾನ; 414 ಬಿಲಿಯನ್ ಡಾಲರ್ ಲಾಭದ ನಿರೀಕ್ಷೆಯಲ್ಲಿ ಇನ್ಫೋಸಿಸ್!
ಹಿಮಾಚಲದಲ್ಲಿ:
ಹಿಮಾಚಲಪ್ರದೇಶದಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ದಿಢೀರ್ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಕುಲು ಜಿಲ್ಲೆಯಲ್ಲಿ 4, ಚಂಬಾದಲ್ಲಿ ಒಬ್ಬರು ಮತ್ತು ಲಾಹುಲ್-ಸ್ಪಿಟಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜೊತೆಗೆ ಲಾಹುಲ್‌ನಲ್ಲಿ 7 ಜನರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ನೆರವಿಗಾಗಿ ಐಟಿಬಿಪಿಯ ತಂಡವೊಂದನ್ನು ರವಾನಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ