ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಟಿಡಿಪಿ ನಾಯಕ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗುರುವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನವದೆಹಲಿ (ಜು.05): ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಟಿಡಿಪಿ ನಾಯಕ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗುರುವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯಕ್ಕೆ ವಿಶೇಷ ಸ್ಥಾನಮಾನದ ರೀತಿಯಲ್ಲಿ ಹೆಚ್ಚಿನ ಹಣಕಾಸು ನೆರವು ನೀಡುವಂತೆ ನಾಯ್ಡು, ಪ್ರಧಾನಿಯನ್ನು ಕೋರಿದರು ಎನ್ನಲಾಗಿದೆ.
ಭೇಟಿ ಬಳಿಕ ಟ್ವೀಟರ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಾಯ್ಡು ‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗುರುವಾರ ರಚನಾತ್ಮಕವಾಗಿ ಮಾತುಕತೆ ನಡೆಸಲಾಯಿತು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ನಮ್ಮ ಆಂಧ್ರಪ್ರದೇಶ ಮತ್ತೆ ಶಕ್ತಿ ಕೇಂದ್ರವಾಗಲಿದೆ’ ಎಂದು ನಾಯ್ಡು ಹಂಚಿಕೊಂಡರು.ಈ ಬಾರಿ ಟಿಡಿಪಿ 16 ಸ್ಥಾನ ಗೆದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಮತ್ತೊಬ್ಬ ಜೆಇಇ ವಿದ್ಯಾರ್ಥಿ ನೇಣಿಗೆ ಶರಣು: ಈ ವರ್ಷದ 13ನೇ ಕೇಸ್
ಸಂವಿಧಾನದ ಅತಿದೊಡ್ಡ ಶತ್ರು ಕಾಂಗ್ರೆಸ್: ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಬುಧವಾರ ರಾಜ್ಯಸಭೆಯಲ್ಲೂ ತಮ್ಮ ರಣಾರ್ಭಟವನ್ನು ಮುಂದುವರೆಸಿದ್ದಾರೆ. ‘ಭಾರತದ ಸಂವಿಧಾನಕ್ಕೆ ಅತಿದೊಡ್ಡ ಶತ್ರುವೆಂದರೆ ಕಾಂಗ್ರೆಸ್. ಏಕೆಂದರೆ ತುರ್ತುಸ್ಥಿತಿ ಹೇರಿದವರು ಇಂದು ಸಂವಿಧಾನ ರಕ್ಷಣೆಯ ನಾಟಕ ಆಡುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಮೋದಿ, ‘ಕಾಂಗ್ರೆಸ್ ಪಕ್ಷ ನಮ್ಮ ದೇಶದ ಸಂವಿಧಾನದ ಅತಿದೊಡ್ಡ ಶತ್ರು. ಜನರನ್ನು ದಾರಿತಪ್ಪಿಸಲು ಅವರು ಸುಳ್ಳು ಕತೆಗಳನ್ನು ಹೆಣೆಯುತ್ತಿದ್ದಾರೆ. 2024ರ ಚುನಾವಣೆ ಸಂವಿಧಾನವನ್ನು ರಕ್ಷಿಸುವುದಕ್ಕೋಸ್ಕರ ನಡೆಯುತ್ತಿದೆ ಎಂದು ಕಾಂಗ್ರೆಸ್ ಹೇಳಿತ್ತು. ಸಂವಿಧಾನವನ್ನು ಚೆನ್ನಾಗಿ ರಕ್ಷಿಸುವವರು ನಾವೇ ಎಂಬ ಕಾರಣಕ್ಕೆ ಜನರು ಎನ್‌ಡಿಎಯನ್ನು ಗೆಲ್ಲಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
ಲೈಂಗಿಕ ಕಿರುಕುಳ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ
ಮೋದಿ ತೀಕ್ಷ್ಣ ವಾಗ್ದಾಳಿ ನಡೆಸುತ್ತಿದ್ದಾಗಲೇ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಅದನ್ನೂ ತೀವ್ರವಾಗಿ ತರಾಟೆ ತೆಗೆದುಕೊಂಡ ಪ್ರಧಾನಿ, ‘ಮೊದಲು ಘೋಷಣೆ ಕೂಗಿ ಈಗ ಓಡಿಹೋಗುತ್ತಿದ್ದಾರೆ’ ಎಂದು ಕಿಡಿಕಾರಿದರು. ಸಭಾಪತಿ ಜಗದೀಪ್ ಧನಕರ್ ಕೂಡ ವಿಪಕ್ಷಗಳ ನಡೆ ಸಂವಿಧಾನಕ್ಕೆ ವಿರುದ್ಧವಾದುದು ಎಂದು ಆಕ್ಷೇಪಿಸಿದರು.