ಸಿಎಂ ಡಿಕೆ ಶಿವಕುಮಾರ ದೆಹಲಿ ಭೇಟಿ: ಮೇಕೆದಾಟು, ಶರಾವತಿ ಯೋಜನೆ ಬಗ್ಗೆ ಮಹತ್ವದ ಬೆಳವಣಿಗೆ, ಅನುಮೋದನೆ ಸಿಗುತ್ತಾ?

Kannadaprabha News   | Kannada Prabha
Published : Oct 23, 2026, 06:18 AM IST
CM DK Shivakumar Delhi visit

ಸಾರಾಂಶ

CM DK Shivakumar Delhi Visit: ನವದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್, ರಾಜ್ಯದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು. ಶರಾವತಿ ಪಂಪ್ಡ್‌ ಸ್ಟೋರೇಜ್‌ ಮತ್ತು ಮೇಕೆದಾಟು ಯೋಜನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಅವರು ಮನವಿ ಮಾಡಿದರು.

 ನವದೆಹಲಿ (ಅ.23): ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್‌ ಸ್ಟೋರೇಜ್‌ ಹಾಗೂ ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ ನೀಡಬೇಕು ಹಾಗೂ ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕರಡು ಅಧಿಸೂಚನೆ ಅಂತಿಮಗೊಳಿಸಬೇಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಮೇಕೆದಾಟು, ಶರಾವತಿ ಯೋಜನೆಗಳಿಗೆ ಅನುಮೋದನೆ ಸಿಗುತ್ತಾ?

ನವದೆಹಲಿಯ ಪರಿಸರ ಭವನದಲ್ಲಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಯೋಜನೆಗಳ ಕುರಿತು ಮನವಿ ಸಲ್ಲಿಸಿದರು.

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯ ಪ್ರಸ್ತಾಪ ಕುರಿತು ಕೊನೆಯ ಬಾರಿಗೆ 2026ರ ಫೆ.28ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 89ನೇ ಸಭೆಯಲ್ಲಿ ಚರ್ಚಿಸಲಾಯಿತು. ತಾಂತ್ರಿಕ ಸಮಿತಿಯು ಎತ್ತಿದ ಅಂಶಗಳಿಗೆ ಸ್ಪಷ್ಟೀಕರಣ ಹಾಗೂ ರಾಷ್ಟ್ರೀಯ ಸುಧಾರಿತ ಅಧ್ಯಯನ ಸಂಸ್ಥೆಯಿಂದ ತಾಂತ್ರಿಕ ವರದಿಯನ್ನು ಸಲ್ಲಿಸುವಂತೆ ರಾಜ್ಯ/ಬಳಕೆದಾರ ಸಂಸ್ಥೆಗೆ ಸೂಚಿಸಲಾಗಿತ್ತು. ಈ ಸಂಬಂಧ ಬೆಂಗಳೂರಿನ ‘ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್’ (ಎನ್‌ಐಎಎಸ್‌) ವರದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಜೊತೆಗೆ, ಸ್ಥಾಯಿ ಸಮಿತಿಯು ಎತ್ತಿದ ಪ್ರಶ್ನೆಗಳಿಗೆ ಕರ್ನಾಟಕ ಸರ್ಕಾರವು ಸೂಕ್ತ ಉತ್ತರಗಳನ್ನು ನೀಡಿದೆ ಎಂದು ವಿವರಿಸಿದರು.

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಭೂ-ತಾಂತ್ರಿಕ ಸಮೀಕ್ಷೆಗಾಗಿ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಒಟ್ಟು 0.0000352 ಹೆಕ್ಟೇರ್ ಪ್ರದೇಶದಲ್ಲಿ 20 ಬೋರ್ ಹೋಲ್‌ಗಳನ್ನು ಕೊರೆಯಲು ಅನುಮತಿ ಕೋರುವ ಈ ಪ್ರಸ್ತಾಪವನ್ನು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸ್ಥಾಯಿ ಸಮಿತಿ ಪರಿಶೀಲನೆಗಾಗಿ 2026ರ ಜು.1ರಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು.

ಸುಪ್ರೀಂ ಕೋರ್ಟ್‌ ಮುಂದೆ ಬಾಕಿ ಇರುವ ವಿವಿಧ ಅರ್ಜಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ

ಇತ್ತೀಚೆಗೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮುಂದೆ ಬಾಕಿ ಇರುವ ವಿವಿಧ ಅರ್ಜಿಗಳ ಸ್ಥಿತಿಗತಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಅಗತ್ಯ ದಾಖಲೆ/ಮಾಹಿತಿಯನ್ನು ಕೋರಿದ್ದು, ಅದನ್ನು ಶೀಘ್ರದಲ್ಲೇ ಒದಗಿಸಲಾಗುವುದು. ಆದರೆ, ಈ ಪ್ರಸ್ತಾಪವು ಕೇವಲ ಸಮೀಕ್ಷೆ ಮತ್ತು ತನಿಖಾ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿದ್ದು, ಪ್ರಸ್ತುತ ಯಾವುದೇ ಸಂರಕ್ಷಿತ ಪ್ರದೇಶದ ಭೂಮಿಯನ್ನು ಯೋಜನೆಗೆ ಬಳಸಿಕೊಳ್ಳಲು ಕೋರುತ್ತಿಲ್ಲ ಎಂದು ವಿವರಿಸಿದ್ದಾರೆ. ಈ ಸಂಬಂಧ ಮೇಲ್ಕಂಡ 2 ಪ್ರಸ್ತಾಪಗಳನ್ನು ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಿಗಮ-ಮಂಡಳಿ ಹುದ್ದೆಗೆ 500 ಜನರ ಪಟ್ಟಿ ವರಿಷ್ಠರಿಗೆ; ಹೆಸರು ಘೋಷಣೆ ಬಗ್ಗೆ ಸಿಎಂ ಹೇಳಿದ್ದೇನು?
ಜನವಸತಿ ಪ್ರದೇಶದಲ್ಲಿ ಗುಂಡು ಹಾರಿಸಿ ಹುಚ್ಚಾಟ, ಚಿಕ್ಕಮಗಳೂರು ಬಿಜೆಪಿ ನಾಯಕನ ವಿರುದ್ಧ ಗಂಭೀರ ಆರೋಪ