ನಿಮಗೆ ಬೇಕಾದ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು: ಮಮತಾ ಬ್ಯಾನರ್ಜಿ

CM Mamata Banerjee: ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಕೇಂದ್ರ ಸರ್ಕಾರವೇ ಈ ಕಾನೂನು ರಚಿಸಿದ್ದು, ಬೇಕಾದ ಉತ್ತರವನ್ನು ಅಲ್ಲಿಂದ ಪಡೆಯಿರಿ ಎಂದಿದ್ದಾರೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

CM Mamata Banerjee s response to the ongoing protests against Waqf in the state mrq

ಕೋಲ್ಕತಾ : ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ.ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ದೀದಿ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.  

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಅವರು, ‘ಶಾಂತವಾಗಿರಿ, ಸಂಯಮದ ಇರಿ ಎನ್ನುವುದು ಎಲ್ಲ ಧರ್ಮದವರಿಗೆ ನನ್ನ ಮನವಿ. ಧರ್ಮದ ಹೆಸರಿನಲ್ಲಿ ಯಾವುದೇ ಅಧರ್ಮೀಯ ವರ್ತನೆಯಲ್ಲಿ ತೊಡಗಬೇಡಿ. ಪ್ರತಿಯೊಬ್ಬ ಮಾನವ ಜೀವವೂ ಅಮೂಲ್ಯ, ರಾಜಕೀಯಕ್ಕಾಗಿ ಗಲಭೆಗಳನ್ನು ಪ್ರಚೋದಿಸಬೇಡಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ’ ಎಂದಿದ್ದಾರೆ.

Latest Videos

ಇದೇ ವೇಳೆ ವಕ್ಫ್‌ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ ಎಂದಿರುವ ಅವರು, ‘ಹಲವರ ಆಕ್ರೋಶಕ್ಕೆ ಕಾರಣವಾಗಿರುವ ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ನಾವು ಈ ವಿಷಯದ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ’ ಎಂದಿದ್ದಾರೆ. ಜೊತೆಗೆ ಬಂಗಾಳದಲ್ಲಿ ಗಲಭೆಗೆ ವಿರುದ್ಧ ಕಾರಣರಾದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದ ವಿರುದ್ಧ ದೀದಿ ಸಡ್ಡು ಮೊದಲಲ್ಲ
ಕೇಂದ್ರದ ನಿಯಮಗಳಿಗೆ ಮಮತಾ ಬ್ಯಾನರ್ಜಿ ಸಡ್ಡು ಹೊಡೆದಿದ್ದು ಇದು ಮೊದಲೇನಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಆಯುಷ್ಮಾನ್‌ ಭಾರತ ಯೋಜನೆಯನ್ನು ಜಾರಿಗೆ ತಂದರೂ ಅದನ್ನು ಈವರೆಗೂ ಮಮತಾ ಬಂಗಾಳದಲ್ಲಿ ಜಾರಿ ಮಾಡಿಲ್ಲ. ಇನ್ನು ಕೇಂದ್ರ ಸರ್ಕಾರದ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಜಾರಿ ಮಾಡಲು ನಾವು ಅವಕಾಶ ನೀಡಲ್ಲ ಎಂದು ಮಮತಾ ಗುಡುಗಿದ್ದರು.

ಇದನ್ನೂ ಓದಿ: ಗೌರ್ನರ್‌ ಸಹಿ ಇಲ್ಲದಿದ್ರೂ ತಮಿಳುನಾಡಿನಲ್ಲಿ 10 ಬಿಲ್ ಜಾರಿ: ದೇಶದಲ್ಲಿ ಇದೇ ಮೊದಲು!

ಭಾರಿ ಹಿಂಸಾಚಾರ
ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಯು ಭಾರಿ ಹಿಂಸಾಚಾರಕ್ಕೆ ತಿರುಗಿದೆ. ಮುರ್ಶಿದಾಬಾದ್‌ನಲ್ಲಿ ಪ್ರತಿಭಟನಾಕಾರರು ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಹಲವು ಪ್ರಯಾಣಿಕರು ಮತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ರಾಜ್ಯಪಾಲ ಸಿ.ವಿ.ಆನಂದಬೋಸ್‌ ಅವರು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಮಾಹಿತಿ ನೀಡಿದ್ದಾರೆ.

ಎನ್ಐಎ ತನಿಖೆಗೆ ಬಿಜೆಪಿ ಪಟ್ಟು
ಹಿಂಸಾಚಾರದ ನಂತರ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಎಸ್‌ಎಫ್‌ ಪಡೆಯನ್ನು ನಿಯೋಜಿಸಲಾಗಿದೆ. ಶುಕ್ರವಾರ ನಡೆದ ಗಲಭೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಸುಮಾರು 118 ಜನರನ್ನು ಬಂಧಿಸಿದ್ದಾರೆ. ಘಟನೆಯ ಎನ್ಐಎ ತನಿಖೆಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದು, ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ‘ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೇ ಹಿಂಸೆ ಪ್ರಚೋದಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಹೊಸ ಇತಿಹಾಸ: ಮಸೂದೆಗೆ ಸಹಿ ಹಾಕಲು ರಾಷ್ಟ್ರಪತಿಗೂ ಡೆಡ್‌ಲೈನ್

ರಾಜ್ಯದಲ್ಲಿಯೂ ಪ್ರತಿಭಟನೆ
ವಕ್ಫ್ ಮಸೂದೆಗೆ ಅಂಗೀಕಾರ ಮುಸ್ಲಿಮರ ವಿರೋಧಿ ಕಾಯ್ದೆಯಾಗಿದ್ದು, ಈ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಮುಸ್ಲಿಂ ಒಕ್ಕೂಟ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆಸಿದರು. ನಗರದ ಹೊಸ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದವರೆಗೆ ಕಪ್ಪು ಬಾವುಟ ಪ್ರದರ್ಶಿಸಿ, ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು.

vuukle one pixel image
click me!