ಚುನಾವಣೆಗೂ ಮೊದಲೇ ಮಿತ್ರ ಪಕ್ಷಕ್ಕೆ ಶಾಕ್ ಕೊಟ್ಟ ನಿತೀಶ್ ಕುಮಾರ್; ಮೋದಿಗಿಂತ ಒಂದು ಹೆಜ್ಜೆ ಮುಂದಿಟ್ಟ ಜೆಡಿಯು

Published : Sep 08, 2025, 12:25 PM IST
Nitish Kumar Narendra Modi

ಸಾರಾಂಶ

ಬಿಹಾರ ಸಿಎಂ ನಿತೀಶ್ ಕುಮಾರ್, ಮಿತ್ರಪಕ್ಷ ಬಿಜೆಪಿಗೆ ಸಣ್ಣದೊಂದು ಶಾಕ್ ನೀಡಿದ್ದಾರೆ. ಔಪಚಾರಿಕ ಮಾತುಕತೆಗೂ ಮುನ್ನವೇ ಈ ಘೋಷಣೆಯಾಗಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಸಂತೋಷ್ ಕುಮಾರ್ ನಿರಾಲಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕ್ಷೇತ್ರ ಹಂಚಿಕೆಗೂ ಮೊದಲೇ ಬಿಹಾರ ಸಿಎಂ ನಿತೀಶ್ ಕುಮಾರ್, ಮಿತ್ರಪಕ್ಷವಾದ ಬಿಜೆಪಿಗೆ ಸಣ್ಣದಾದ ಶಾಕ್ ನೀಡಿದೆ. ನಿತೀಶ್ ಕುಮಾರ್ ಅವರದ್ದು ಏಕಪಕ್ಷೀಯ ನಿರ್ಧಾರ ಎಂಬ ಮಾತುಗಳು ಬಿಹಾರ ರಾಜಕೀಯ ಅಂಗಳದಲ್ಲಿ ಕೇಳಿ ಬರುತ್ತಿವೆ. ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ-ಜೆಡಿಯು (ಎನ್‌ಡಿಎ) ಜೊತೆಯಾಗಿ ಎದುರಿಸಲಿವೆ. ಈ ಹಿನ್ನೆಲೆ ಕ್ಷೇತ್ರವಾರು ಹಂಚಿಕೆಯ ರಾಜಕೀಯ ತೀವ್ರಗೊಂಡಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಜೆಡಿಯು ರಾಜ್‌ಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಎನ್‌ಡಿಎ ಮಿತ್ರಪಕ್ಷಗಳ ನಡುವಿನ ಔಪಚಾರಿಕ ಮಾತುಕತೆಗೂ ಮುನ್ನವೇ ಈ ಘೋಷಣೆಯಾಗಿರೋದು ಹಲವು ಹೊಸ ಚರ್ಚೆಗಳಿಗೆ ನಾಂದಿಯಾಗಿದೆ.

ಬಿಹಾರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ನಿತೀಶ್ ಕುಮಾರ್

ಬಕ್ಸಾರ್‌ ಕ್ಷೇತ್ರದ ಸಭೆಯೊಂದರಲ್ಲಿ ಜೆಡಿಯು ಮುಖ್ಯಸ್ಥ, ಸಿಎಂ ನಿತೀಶ್ ಕುಮಾರ್ ಭಾಗಿಯಾಗಿದ್ದರು. ಈ ವೇಳೆ ರಾಜ್‌ಪುರ ವಿಧನಾಸಭಾ ಕ್ಷೇತ್ರದಿಂದ ಮಾಜಿ ಸಚಿವ ಸಂತೋಷ್ ಕುಮಾರ್ ನಿರಾಲಾ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಿಸಿ, ತಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕೆಂದು ನಿತೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ರಾಜ್‌ಪುರ ಮೀಸಲು (ಎಸ್‌ಸಿ) ವಿಧಾನಸಭಾ ಕ್ಷೇತ್ರವಾಗಿದೆ. ಕ್ಷೇತ್ರ ಹಂಚಿಕೆಗೂ ಮುನ್ನವೇ ನಿತೀಶ್ ಕುಮಾರ್ ಅವರ ಘೋಷಣೆ ಬಿಹಾರ ರಾಜಕೀಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ.

ಯಾರು ಈ ಸಂತೋಷ್ ಕುಮಾರ್ ನಿರಾಲಾ?

ಮಾಜಿ ಸಚಿವರಾಗಿರುವ ಸಂತೋಷ್ ಕುಮಾರ್ ನಿರಾಲಾ, 2020 ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿಶ್ವನಾಥ್ ರಾಮ್ ವಿರುದ್ಧ ಸೋತಿದ್ದರು. ಇದಕ್ಕೂ ಮೊದಲು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜ್‌ಪುರ ವಿಧನಾಸಭಾ ಕ್ಷೇತ್ರದ ಜೆಡಿಯು ಪಕ್ಷದ ಪ್ರಬಲ ಆಕಾಂಕ್ಷಿಯಾಗಿ ಸಂಂತೋಷ್ ಕುಮಾರ್ ನಿರಾಲಾ ಗುರುತಿಸಿಕೊಂಡಿದ್ದಾರೆ.

ಸಂತೋಷ್ ಕುಮಾರ್ ನಿರಾಲಾ ಹೆಸರು ಘೋಷಣೆ ಬಳಿಕ ಮಾತನಾಡಿದ ಸಿಎಂ ನಿತೀಶ್ ಕುಮಾರ್, ನಾವು ಬಿಹಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಈಗ ಚುನಾವಣೆಯಲ್ಲಿ ನೀವು ನಮ್ಮನ್ನು ಬೆಂಬಲಿಸಬೇಕು. ಸಂತೋಷ್ ಕುಮಾರ್ ನಿರಾಲಾ ಅವರು ರಾಜ್‌ಪುರ ವಿಧನಾಸಭಾ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ಹಾಗಾಗಿ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕಿದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಿಪೋರ್ಟರ್ಸ್ ಡೈರಿ: ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ: ನಗೆ ತರಿಸಿದ ‘ದೊಡ್ಡ ರೋಗ’

ಎನ್‌ಡಿಎ ಮಿತ್ರ ಪಕ್ಷಗಳಿಂದ ಆಕ್ಷೇಪ ಇಲ್ಲ

ನಿತೀಶ್ ಕುಮಾರ್ ಈ ನಿರ್ಧಾರವನ್ನು ಎನ್‌ಡಿಎ ಮಿತ್ರಪಕ್ಷಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ. ರಾಜ್‌ಪುರ ಕ್ಷೇತ್ರ ಬಿಜೆಪಿ-ಜೆಡಿಯುನ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಜೆಡಿಯು ಅತ್ಯಧಿಕ ಸಾಂಪ್ರದಾಯಿಕ ಮತಗಳನ್ನು ಹೊಂದಿದೆ. ಈ ಹಿನ್ನೆಲೆ ಮೈತ್ರಿ ಒಪ್ಪಂದಕ್ಕೂ ಮೊದಲೇ ನಿತೀಶ್ ಕುಮಾರ್ ಈ ಘೋಷಣೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಜೆಡಿಯು ಪಕ್ಷದ ಈ ಘೋಷಣೆ ರಾಜಕೀಯ ಗೊಂದಲಗಳನ್ನು ಹೆಚ್ಚಿಸಿರೋದು ನಿಜ. ರಾಜ್‌ಪುರ ಅವರದ್ದೇ ಕ್ಷೇತ್ರವಾಗಿರೋದರಿಂದ ನಿತೀಶ್ ಕುಮಾರ್ ಈ ಘೋಷಣೆ ಮಾಡಿರಬಹುದು. ಔಪಚಾರಿಕ ಸೀಟು ಹಂಚಿಕೆ ಕುರಿತು ಮಾತುಕತೆ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಬಿಜೆಪಿ ವಕ್ತಾರ ಮನೋಜ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಉಮೇದಾರರು ಘೋಷಣೆಗೆ ಜೆಡಿಯು ಹೇಳಿದ್ದೇನು?

ಈ ಹಿಂದಿನ ಚುನಾವಣೆಗಳಲ್ಲಿಯೂ ಸಂತೋಷ್ ಕುಮಾರ್ ನಿರಾಲಾ ಅವರೇ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಿರಾಲಾ ಅವರು ಈ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ನಾಯಕರಾಗಿದ್ದಾರೆ. ಅವರ ಘೋಷಣೆ ಯಾವುದೇ ಅಚ್ಚರಿಯನ್ನುಂಟು ಮಾಡಿಲ್ಲ. ರಾಜ್‌ಪುರದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವಾಗ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದಾರೆ. ಈ ಸಮಯದಲ್ಲಿ ಉಮೇದಾರರ ಹೆಸರು ಘೋಷಿಸೋದು ಸೂಕ್ತವೆಂದು ಸಿಎಂ ಭಾವಿಸಿರಬಹುದು ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಹೇಳುತ್ತಾರೆ.

ಇದನ್ನೂ ಓದಿ: 6 ಹಡೆದವಳ ಮುಂದೆ 3 ಹಡೆದವಳು ಹೇಳಿದಂತಾಯಿತು, ಹೀಗೆಂದರೇನು ಖರ್ಗೆಯವರೇ? HDK ಪ್ರಶ್ನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್