
ಭೋಪಾಲ್(ಡಿ.12) ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿ ಸಂಪುಟ ರಚನೆ ಸರ್ಕಸ್ ನಡೆಸುತ್ತಿದೆ.ಈ ಪೈಕಿ ಇಂದು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣವತನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲಾಲ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಧ್ಯಪ್ರದೇಶ ರಾಜ್ಯಪಾಲ ಮಂಗೂಬಾಯಿ ಸಿ ಪಟೇಲ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಮಧ್ಯಪ್ರದೇಶದ ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಹಾಗೂ ಜಗದೀಶ್ ದೇವ್ಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಲು ವೇದಿಕೆಗೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಬಿಜೆಪಿ ಬೆಂಬಲಿಗರು ಮಾಮಾ ಮಾಮಾ ಎಂದು ಘೋಷಣೆ ಕೂಗಿದ್ದಾರೆ. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಮಾಮಾ ಎಂದೇ ಜನಪ್ರಿಯರಾಗಿದ್ದಾರೆ. ಶಿವರಾಜ್ ಸಿಂಗ್ ಚವ್ಹಾಣ್ ಮತ್ತೆ ಮುಖ್ಯಮಂತ್ರಿಯಾಗಬೇಕು ಅನ್ನೋದು ಹಲವು ಬೆಂಬಲಿಗರ ಆಶಯವಾಗಿತ್ತು. ಆದರೆ ಬಿಜೆಪಿ ಮೂರು ರಾಜ್ಯಗಳಲ್ಲಿ ಅಚ್ಚರಿ ಆಯ್ಕೆ ಮಾಡಿದೆ.
ಕೇಂದ್ರ ಸಂಪುಟಕ್ಕೆ 3 ಸಚಿವರ ರಾಜೀನಾಮೆ: 4 ಸಚಿವರಿಗೆ ಹೆಚ್ಚುವರಿ ಖಾತೆ; ಶೋಭಾಗೆ ಆಹಾರ, ಆರ್‌ಸಿಗೆ ಜಲಶಕ್ತಿ ಖಾತೆ
ಪ್ರಧಾನಿ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಕೇಂದ್ರ ನಾಯಕರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಈ ಬಾರಿ ಮೂರು ರಾಜ್ಯಕ್ಕೆ ಮುಖ್ಯಮಂತ್ರಿಗಳ ಆಯ್ಕೆ ಮಾಡಿದೆ. ಪ್ರಮುಖವಾಗಿ ಮಧ್ಯಪ್ರದೇಶದಲ್ಲಿ ಹಿಂದುಳಿದ ಸಮುದಾಯಕ್ಕೆ ಸೇರಿದ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ. ಬ್ರಾಹ್ಮಣ ಸಮುದಾಯದ ರಾಜೇಶ್ ಶುಕ್ಲಾ ಹಾಗೂ ದಲಿತ ಸಮುದಾಯದ ಜಗದೀಶ್ ದೇವಡಾ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಜಾತಿ ಪ್ರಾತಿನಿದ್ಯವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಯಾದವ ಸಮಾಜವು ಅಷ್ಟೇನೂ ಪ್ರಭಾವಿಯಾಗಿಲ್ಲ. ಆದರೂ ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಜನ ಹಿಂದುಳಿದ ವರ್ಗ (ಒಬಿಸಿ) ಜನಸಂಖ್ಯೆ ಇದೆ. ಒಬಿಸಿ ಮತಗಳ ಮೇಲೆ ಕಣ್ಣಿರಿಸಿ ಮೋಹನ್ ಯಾದವ್‌ಗೆ ಬಿಜೆಪಿ ವರಿಷ್ಠರು ಮನ್ನಣೆ ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಈ ಲೆಕ್ಕಾಚಾರ ಬಿಜೆಪಿಗೆ ವರವಾಗಲಿದೆ ಅನ್ನೋದು ರಾಜಕೀಯ ಪಂಡಿತರ ಅಭಿಪ್ರಾಯ.
ಮೋದಿಜಿ ಎನ್ನಬೇಡಿ, ಮೋದಿ ಎಂದರೆ ಸಾಕು, ಸಂಸದರು ಕಾರ್ಯಕರ್ತರಿಗೆ ಪ್ರಧಾನಿ ಮನವಿ!
ಮೋಹನ್ ಯಾದವ್ ವಿಧಾನಸಭೆಗೆ ಆಯ್ಕೆಯಾಗಿದ್ದು ಇದು ಮೂರನೇ ಬಾರಿ. ಹಿಂದಿನ ಸರ್ಕಾರದಲ್ಲಿ ಅವರು ಶಿಕ್ಷಣ ಸಚಿವರಾಗಿದ್ದರು. ಇನ್ನು ಡಿಸಿಎಂಗಳಾದ ದೇವಡಾ ಮತ್ತು ಶುಕ್ಲಾ ಕೂಡಾ ಹಿಂದಿನ ಸಿಎಂ ಚೌಹಾಣ್ ಸಂಪುಟದಲ್ಲಿ ಸಚಿವರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ