ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಮುಂಬೈ ನಿವಾಸದಲ್ಲಿ ದುಷ್ಕರ್ಮಿಗಳ ದಾಂಧಲೆ

Kannadaprabha News   | Asianet News
Published : Jul 09, 2020, 09:25 AM IST
ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಮುಂಬೈ ನಿವಾಸದಲ್ಲಿ ದುಷ್ಕರ್ಮಿಗಳ ದಾಂಧಲೆ

ಸಾರಾಂಶ

ಮುಂಬೈನ ದಾದರ್‌ನಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಐತಿಹಾಸಿಕ ‘ರಾಜಗೃಹ’ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಜು.09): ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮುಂಬೈ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ.

ಮುಂಬೈನ ದಾದರ್‌ನಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಐತಿಹಾಸಿಕ ‘ರಾಜಗೃಹ’ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಪೊಲೀಸ್‌ ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಅಂಬೇಡ್ಕರ್‌ ಅವರ ರಾಜಗೃಹ ನಿವಾಸಕ್ಕೆ ಕನಿಷ್ಠ ಇಬ್ಬರು ಅಪರಿಚಿತ ವ್ಯಕ್ತಿಗಳು ಒಳನುಗ್ಗಿ ಸಿಸಿಟಿವಿ ಕ್ಯಾಮೆರಾ, ಗಾಜಿನ ಕಿಟಕಿಗಳು ಮತ್ತು ಹೂ ಕುಂಡಗಳನ್ನು ಒಡೆದು ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. 

ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಕೃತ್ಯವನ್ನು ಖಂಡಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ‘ರಾಜಗೃಹ ನಿವಾಸದ ಮೇಲಿನ ದಾಳಿಯನ್ನು ಸಹಿಸಲು ಅಸಾಧ್ಯ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ’ ಎಂದಿದ್ದಾರೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಆರೈಕೆ ಮಾಡಿದ್ದ ಜಿಗನಬಿ ಬಾಪುಲಾಲ್ ಪಟೇಲ ಇನ್ನಿಲ್ಲ

ದಾದರ್‌ನ ಹಿಂದು ಕಾಲೋನಿಯಲ್ಲಿರುವ ಎರಡು ಅಂತಸ್ತಿನ ನಿವಾಸ ಇದಾಗಿದೆ. ಬಾಬಾ ಸಾಹೇಬ್‌ ಅವರ ಪುಸ್ತಕ, ಫೋಟೋ, ಚಿತಾಭಸ್ಮ ಮತ್ತಿತರೆ ಸಾಮಗ್ರಿ ಹೊಂದಿರುವ ಮ್ಯೂಸಿಯಂ ಕೂಡ ಇದೆ. ಸದ್ಯ ಈ ನಿವಾಸದಲ್ಲಿ ಅಂಬೇಡ್ಕರ್‌ ಅವರ ಸೊಸೆ, ಮರಿಮೊಮ್ಮಕ್ಕಳಾದ ಪ್ರಕಾಶ್‌ ಅಂಬೇಡ್ಕರ್‌, ಆನಂದರಾವ್‌ ಹಾಗೂ ಭೀಮರಾವ್‌ ಅವರು ವಾಸ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ
India Latest News Live: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ