ಕೊರೋನಾ ಭೀತಿ; ಲಾಕ್‌ಡೌನ್ ಕುರಿತು ಸಿಎಂ ಯೋಗಿ ಆದಿತ್ಯನಾಥ್ ನಿರ್ಧಾರ!

By Suvarna NewsFirst Published Apr 13, 2021, 6:08 PM IST
Highlights

ಕೊರೋನಾ ಆತಂಕ ಇದೀಗ ಭಾರತದ ಎಲ್ಲಾ ರಾಜ್ಯಗಳಿಗೆ ಆವರಿಸಿದೆ. ಒಂದೊಂದೆ ರಾಜ್ಯಗಳು ಲಾಕ್‌ಡೌನ್, ನೈಟ್ ಕರ್ಫ್ಯೂ ನಿಯಮ ಜಾರಿಗೆ ತರುತ್ತಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ಲಾಕ್‌ಡೌನ್ ಜಾರಿಯಾಗಲಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸ್ಪಷ್ಟನೆ ನೀಡಿದ್ದಾರೆ.

ಲಕ್ನೌ(ಏ.13): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ಸಂಪೂರ್ಣ ಲಾಕ್‌ಡೌನ್ ಮಾಡಲು ಮುಂದಾಗಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಕೂಡ ಲಾಕ್‌ಡೌನ್ ಆಗಲಿದೆ ಅನ್ನೋ ಮಾತನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಳ್ಳಿ ಹಾಕಿದ್ದಾರೆ. 

ಕೊರೋನಾ ಭೀಕರತೆ ನಲುಗುತ್ತಿದೆ ಭಾರತ, ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ!...

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆದಿತ್ಯನಾಥ್ ಹೇಳಿದ್ದಾರೆ. ಇಷ್ಟೇ ಅಲ್ಲ ಸೂಕ್ತ ಚಿಕಿತ್ಸೆ ನೀಡಿ ಪ್ರಾಣ ರಕ್ಷಣೆ ಕಾರ್ಯ ಉತ್ತರ ಪ್ರದೇಶ ಮಾಡಲಿದೆ ಎಂದು ಯೋಗಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್; ಸರ್ಕಾರದಿಂದ ಅಧೀಕೃತ ಘೋಷಣೆ ಸಾಧ್ಯತೆ!

ಕೊರೋನಾ ಪರೀಕ್ಷೆಗೆ ಅಗತ್ಯ ಬಿದ್ದಲ್ಲಿ ಖಾಸಗಿ ಲ್ಯಾಬ್ ಸರ್ಕಾರ ಪಡೆದುಕೊಳ್ಳಲಿದೆ. ಈಗಾಗಲೇ ಪರೀಕ್ಷೆ ಫಲಿತಾಂಶ ವಿಳಂಭವಾಗುತ್ತಿರುವುದರಿಂದ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿದೆ ಅನ್ನೋ ದೂರುಗಳು ಬಂದ ಕಾರಣ, ಎಲ್ಲಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಯೋಗಿ ಸೂಚಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿ ದಿನ 1.5 ಲಕ್ಷ ಆರ್‌ಟಿ ಪಿಸಿಆರ್ ಕೊರೋನಾ ಪರೀಕ್ಷೆ ಮಾಡುವ ಸಾಮರ್ಥ್ಯವಿದೆ. ಇದೇ ವೇಳೆ ಖಾಸಗಿ ಲ್ಯಾಬ್‌ಗಳು ಕೊರೋನಾ ಪರೀಕ್ಷೆಗೆ ಹೆಚ್ಚುವರಿ ಶುಲ್ಕ ವಿಧಿಸಿದಂತೆ ಸೂಚಿಸಿದ್ದಾರೆ. ಈ ಕುರಿತು ಯಾವುದೇ ದೂರು ಬಂದಲ್ಲಿ, ಅಂತಹ ಲ್ಯಾಬ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕ್ಯಾನ್ಸರ್ ಆಸ್ಪತ್ರೆಯನ್ನು ಕೊರೋನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗೆ ಬೆಡ್ ಹಾಗೂ ಇತರ ಕೇಂದ್ರಗಳ ಹೆಚ್ಚುವರಿಯಾಗಿ ಸ್ಫಾಪನೆ ಮಾಡಲಾಗಿದೆ. ಹೀಗಾಗಿ ಸೋಂಕಿತರ ಚಿಕಿತ್ಸೆಗೆ ಯಾವ ಸಮಸ್ಯೆ ಬರದ ರೀತಿ ನೋಡಿಕೊಳ್ಳಲಾಗುವುದು ಎಂದು ಆದಿತ್ಯನಾಥ್ ಹೇಳಿದ್ದಾರೆ.

click me!