ಸಿಎಂ ಯೋಗಿ ಆದಿತ್ಯನಾಥ್ ಮಿರ್ಜಾಪುರದಲ್ಲಿರು ವಿಂಧ್ಯಾವಾಸಿನಿ ದೇವಸ್ಥಾನಕ್ಕೇ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ವಿಂದ್ಯಾ ಕಾರಿಡಾರ್ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡಿದ್ದಾರೆ.
ಲಖನೌ(ಸೆ.23) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಿರ್ಜಾಪುರದ ವಿಂಧ್ಯಾವಾಸಿನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.. ಈ ವೇಳೆ ಪ್ರಸಿದ್ಧ ವಿಂಧ್ಯವಾಸಿನಿ ದೇವಿ ದರ್ಶನ ಪಡೆದ ಯೋಗಿ ಆದಿತ್ಯನಾಥ್ ವಿಶೇಷ ಪೂಜೆ ಸಲ್ಲಿಸಿದರು. ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಶಾರದಾ ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುಖ, ಸಮೃದ್ಧಿಗಾಗಿ ಪ್ರಾರ್ಥನೆ
ಸಿಎಂ ಯೋಗಿ ಆದಿತ್ಯನಾಥ್ ಅವರು ವಿಂಧ್ಯಧಾಮದಲ್ಲಿ ಮೊದಲು ವಿಂಧ್ಯವಾಸಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅಲ್ಲದೆ, ಸುಖ, ಆರೋಗ್ಯ ಮತ್ತು ಸಮೃದ್ಧ ಉತ್ತರ ಪ್ರದೇಶಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಭಕ್ತರಿಗೆ ಯಾವುದೇ ತೊಂದರೆ ಆಗಬಾರದು
ದರ್ಶನದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಂಧ್ಯ ಕಾರಿಡಾರ್ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಮಗಾರಿಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕು. ಉಳಿದ ಕಾಮಗಾರಿಗಳಲ್ಲೂ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಅಕ್ಟೋಬರ್ 3 ರಿಂದ ಶಾರದಾ ನವರಾತ್ರಿ ಆರಂಭವಾಗುತ್ತಿದೆ. ದೇಶ-ವಿದೇಶಗಳಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹಬ್ಬಗಳಲ್ಲಿ ಸ್ವಚ್ಛತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದರು. ಈ ವೇಳೆ ಶಾಸಕ ರತ್ನಾಕರ್ ಮಿಶ್ರಾ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಆಡಳಿತಾತ್ಮಕ ಅಧಿಕಾರಿಗಳು ಉಪಸ್ಥಿತರಿದ್ದರು.