
ನವದೆಹಲಿ(ಜೂ.16): ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರಿಗೂ ಉಚಿತ ಕೊರೋನಾ ಲಸಿಕೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 18 ವರ್ಷ ತುಂಬಿದ ಎಲ್ಲರಿಗೂ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯುವ ಅವಕಾಶವನ್ನು ಕಲ್ಪಿಸಿದೆ. ಅಂದರೆ ಲಸಿಕೆ ಕೇಂದ್ರಕ್ಕೆ ತೆರಳಿ ಕೋವಿನ್ ವೆಬ್‌ನಲ್ಲಿ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದು.
ಮೊದಲಿಗೆ ಲಸಿಕೆ ಆಕಾಂಕ್ಷಿತರು ಕೋವಿನ್ ಆ್ಯಪ್ನಲ್ಲಿ ತಮ್ಮ ಹೆಸರು ಮತ್ತು ಆಧಾರ್ ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿತ್ತು. ಆ ಬಳಿಕ ತಮ್ಮ ಸರದಿ ಬಂದಾಗ ಲಸಿಕೆ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಬೇಕಿತ್ತು. ಆದರೆ ಇದೀಗ ಲಸಿಕೆ ಆಕಾಂಕ್ಷಿತರು ಕೋವಿನ್ ಆ್ಯಪ್ನಲ್ಲಿ ಲಸಿಕೆ ಕಾಯ್ದಿರಿಸುವುದು ಕಡ್ಡಾಯವಲ್ಲ. ಇದರಿಂದ ತ್ವರಿತಗತಿಯಲ್ಲಿ ಹೆಚ್ಚು ಮಂದಿಗೆ ಲಸಿಕೆ ವಿತರಿಸಬಹುದು. ದೇಶದ ಬಹುಸಂಖ್ಯಾತರಾದ 18-44 ವರ್ಷದವರಿಗೆ ಲಸಿಕೆ ನೀಡುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತು ವಾಣಿಜ್ಯಾತ್ಮಕ ಚಟುವಟಿಕೆಗಳ ಮೇಲಿನ ನಿರ್ಬಂಧ ತೆರವಿಗೆ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ.
ಮೇ 24ರಂದೂ ಕೇಂದ್ರ ಇಂಥದ್ದೇ ಪ್ರಕಟಣೆ ನೀಡಿತ್ತಾದರೂ ಆನ್‌ಸೈಟ್ ನೋಂದಣಿ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು ಎಂದಿತ್ತು.
ಮತ್ತೊಂದೆಡೆ ಲಸಿಕೆ ಪಡೆಯಲು ಜನರಲ್ಲಿ ಹಿಂಜರಿಕೆ ಇರುವುದನ್ನು ಒಪ್ಪಿಕೊಳ್ಳಲೇಬೇಕು. ಜೊತೆಗೆ ಇದು ಜಾಗತಿಕ ಬೆಳವಣಿಗೆಯಾಗಿದ್ದು, ಈ ಸಮಸ್ಯೆಯನ್ನು ಸಮುದಾಯದ ಹಂತದಲ್ಲಿ ವೈಜ್ಞಾನಿಕವಾಗಿ ಪರಿಹರಿಸಿಕೊಳ್ಳಬೆಕಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ